

ಉಡುಪಿ: ಮಕ್ಕಳು ಕ್ರಿಯಾಶೀಲ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು. ಅದರಿಂದ ಅಂತರ್ಗತ ಕೌಶಲ ಅನಾವರಣಕ್ಕೆ ಸಹಕಾರಿಯಾಗುತ್ತದೆ. ಪಾಲಕರು ತಮ್ಮ ಮಕ್ಕಳಿಗೆ ಒಳ್ಳೆಯ ತತ್ತ್ವಗಳನ್ನು ತಿಳಿಸಿ, ಅದನ್ನು ಮೈಗೂಡಿಸಿಕೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಎಜಿಇ ಮಣಿಪಾಲದ ಕಾರ್ಯದರ್ಶಿ ಡಾ. ನಾರಾಯಣ ಸಭಾಹಿತ ಸಲಹೆ ನೀಡಿದರು.
ಅಕಾಡೆಮಿ ಆಫ್ ಜನರಲ್ ಎಜುಕೇಷನ್ ಮಣಿಪಾಲದ ಅಂಗ ಸಂಸ್ಥೆಯಾದ ಮುಕುಂದ ಕೃಪಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕ ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.
ಎಜಿಇ ಮಣಿಪಾಲದ ಆಡಳಿತಾಧಿಕಾರಿ ಡಾ. ಶ್ರೀಧರ ರಂಗನಾಥ ಪೈ ಹಾಗೂ ಶಾಲಾ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಂಗ ಪೈ ಮಾತನಾಡಿದರು.
ಶಾಲೆಯ ಹಳೆಯ ವಿದ್ಯಾರ್ಥಿ ಗಳಾದ ಎಂಐಟಿಯ ಸಹಾಯಕ ಅಧ್ಯಾಪಕ ಡಾ. ಅನೂಪ ಹಾಗೂ ವಿದುಷಿ ಮಿಥಿಲಾ ಉಪಾಧ್ಯ ಬಹುಮಾನ ವಿತರಿಸಿದರು.
ಶಾಲಾ ಮುಖ್ಯೋಪಾಧ್ಯಾಯನಿ ವಿನುತಾ ಎಸ್. ನಾಯಕ ಸ್ವಾಗತಿಸಿದರು. ಶಿಕ್ಷಕಿಯರಾದ ಗಾಯತ್ರಿ ಹಾಗೂ ವನಿತಾ ಕಾರ್ಯಕ್ರಮ ನಿರ್ವಹಿಸಿದರು. ನಂದಾ ಹಾಗೂ ವಿದ್ಯಾ ಅತಿಥಿಗಳನ್ನು ಪರಿಚಯಿಸಿದರು. ವೀಣಾ ಕಾಮತ ವಂದಿಸಿದರು.