ಆಧುನಿಕ ಶಿಕ್ಷಣದೊಂದಿಗೆ ತಾಂತ್ರಿಕ ಕೌಶಲ

 ಮೂಡುಬಿದಿರೆ ಕಾಳಿಕಾಂಬಾ ದೇವಸ್ಥಾನ ಮಹೋತ್ಸವ ಧಾರ್ಮಿಕ ಸಭೆಯಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು. ಪಡುಕುತ್ಯಾರು ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ, ದೇವಸ್ಥಾನದ ಆಡಳಿತ ಮೊಕ್ತೇಸರ ಎಂ.ಕೆ.ಬಾಲಕೃಷ್ಣ ಆಚಾರ್ಯ ಮೊದಲಾದವರಿದ್ದರು.
ಮೂಡುಬಿದಿರೆ ಕಾಳಿಕಾಂಬಾ ದೇವಸ್ಥಾನ ಮಹೋತ್ಸವ ಧಾರ್ಮಿಕ ಸಭೆಯಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು. ಪಡುಕುತ್ಯಾರು ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ, ದೇವಸ್ಥಾನದ ಆಡಳಿತ ಮೊಕ್ತೇಸರ ಎಂ.ಕೆ.ಬಾಲಕೃಷ್ಣ ಆಚಾರ್ಯ ಮೊದಲಾದವರಿದ್ದರು.
Published on
 ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ
ವಿಶ್ವಕರ್ಮ ಸಮಾಜದವರು ಪರಂಪರೆಯಿಂದ ಪಡೆದ ತಾಂತ್ರಿಕ ಕೌಶಲವನ್ನು ಆಧುನಿಕ ಶಿಕ್ಷಣದೊಂದಿಗೆ ಸಂಯೋಜಿಸಿ ದೇಶದ ರಕ್ಷಣಾ ರಂಗಕ್ಕೆ ಕೊಡುಗೆಯಾಗುವ ಆವಿಷ್ಕಾರಗಳನ್ನು ರೂಪಿಸಬೇಕು ಎಂದು ಪಡುಕುತ್ಯಾರು ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಹೇಳಿದರು.
 ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನ ವರ್ಷಾವಧಿ ಮಹೋತ್ಸವದ ಅಂಗವಾಗಿ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.
ಡ್ರೋನ್ ತಯಾರಿಕೆಯಲ್ಲಿ ವಿಶ್ವಮಟ್ಟದ ಎರಡು ದಾಖಲೆಗಳನ್ನು ನಿರ್ಮಿಸಿರುವ ಎಂಆರ್‌ಪಿಎಲ್‌ನ ಡೆಲ್ಲಿ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿ ಈಶಾನ ವಿಕ್ರಮ ಪಾಲ್ತಾಡಿ, ಪಡುಮಾರ್ನಾಡು ಗ್ರಾಮ ಕೂಡುವಳಿಕೆ ಮೊಕ್ತೇಸರರಾಗಿ 29 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪುರೋಹಿತ ಜಗನ್ನಾಥ ಆಚಾರ್ಯ, ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ರತ್ನಾವತಿ ಆಚಾರ್ ಕೆ., ಶ್ರವಣ ಮತ್ತು ವಾಕ್ ದೋಷವಿದ್ದರೂ ಚಿತ್ರ-ಶಿಲ್ಪಕಲೆಯಲ್ಲಿ ಸಾಧನೆ ಮಾಡುತ್ತಿರುವ ಅಖಿಲೇಶ್ ಆಚಾರ್ಯ, ಮಹಿಳಾ ಸಮಿತಿ ಅಧ್ಯಕ್ಷೆ ಶಾಂತಲಾ ಎಸ್.ಆಚಾರ್ಯ, ಚಿತ್ರಾಕ್ಷ ಆಚಾರ್ಯ ಅವರನ್ನು ಗೌರವಿಸಲಾಯಿತು.
ರತ್ನಾವತಿ ಆಚಾರ್, ಕಟಪಾಡಿ ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರ ಮುರಹರಿ ಆಚಾರ್ಯ ಮಾತನಾಡಿದರು. ದೇವಸ್ಥಾನ ಆಡಳಿತ ಮೊಕ್ತೇಸರ ಎಂ.ಕೆ.ಬಾಲಕೃಷ್ಣ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಶಿವರಾಮ ಆಚಾರ್ಯ ಉಳಿಯ ಸ್ವಾಗತಿಸಿದರು.  
 ಸಮಾರೋಪ ಸಮಾರಂಭದಲ್ಲಿ ಶ್ರೀ ಕಾಳಿಕಾಂಬಾ ಸೇವಾ ಸಮಿತಿ ಅಧ್ಯಕ್ಷ ಶ್ರೀನಾಥ ಆಚಾರ್ಯ, ಆಡಳಿತ ಮಂಡಳಿ ಸದಸ್ಯರಾದ ಶಿವಪ್ರಸಾದ್ ಮತ್ತು ಜಯಶ್ರೀ ಜಗನ್ನಾಥ್ ಉಪಸ್ಥಿತರಿದ್ದರು. ಯೋಗೀಶ ಆಚಾರ್ಯ ವಂದಿಸಿದರು. ಗೀತಾ ಯೋಗೀಶ್, ಶಶಿಧರ ಆಚಾರ್ಯ ಮತ್ತು ಯಮುನಾ ಯೋಗೀಶ್ ಸನ್ಮಾನ ಪತ್ರ ವಾಚಿಸಿದರು. ಬೇಲಾಡಿ ಜಗದೀಶ ಆಚಾರ್ಯ, ಧನಂಜಯ ಮೂಡುಬಿದಿರೆ ನಿರೂಪಿಸಿದರು.

ವಿದ್ಯಾರ್ಥಿ ವೇತನ ವಿತರಣೆ

ಎಸ್ಸೆಸ್ಸೆಲ್ಸಿಯಲ್ಲಿ ಸಾಧನೆಗೈದ ಪದ್ಮಶ್ರೀ ಶ್ರೀಪಾದ ಹೆಗ್ಡೆ ಹಾಗೂ ಲಿಖಿತಾ ವಸಂತ ಆಚಾರ್ಯ ಅವರಿಗೆ ದಿ.ಸುನಂದಾ ಭಾಸ್ಕರ ಆಚಾರ್ಯ ಸಂಸ್ಮರಣಾರ್ಥ ವಿದ್ಯಾರ್ಥಿವೇತನ ನೀಡಲಾಯಿತು. ಪಿಯುಸಿಯಲ್ಲಿ ಗರಿಷ್ಠ ಅಂಕ ಗಳಿಸಿದ ಶರಣ್ಯಾ ರವೀಂದ್ರ ಆಚಾರ್ಯ ಮುರಗೋಳಿ ಅವರಿಗೆ ಬಿ.ಲಕ್ಷ್ಮಣ ಆಚಾರ್ಯ ಸರಸ್ವತಿ ಸಂಸ್ಮರಣ ವಿದ್ಯಾರ್ಥಿವೇತನ ವಿತರಿಸಲಾಯಿತು.

ಯುವ ಪ್ರತಿಭೆಗಳು ಸಂಶೋಧನೆ ಮತ್ತು ನವೀನ ಆವಿಷ್ಕಾರಗಳ ಮೂಲಕ ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸುವತ್ತ ಹೆಜ್ಜೆ ಇಡಬೇಕು. ಇದರಿಂದ ವಿದೇಶಗಳ ಅವಲಂಬನೆ ಕಡಿಮೆಯಾಗಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net