ಕೆಎಸ್ಸಾರ್ಟಿಸಿಯ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಮಾತನಾಡಿ, ಮೂಡುಬಿದಿರೆಯಲ್ಲಿ ಜನಸಂದಣಿ, ವಾಹನ ದಟ್ಟಣೆ ಹೆಚ್ಚಿದ್ದು, 1968ರಿಂದಲೂ ಖಾಸಗಿ ಬಸ್‌ಗಳೇ ಸಂಚಾರ ನಡೆಸುತ್ತಿವೆ. ಪ್ರಸ್ತುತ ನಾಲ್ಕು ಕೆಎಸ್ಸಾರ್ಟಿಸಿ ಬಸ್‌ಗಳು ಮಂಗಳೂರು-ಮೂಡುಬಿದಿರೆ-ಕಾರ್ಕಳ ಮಾರ್ಗದಲ್ಲಿ ಸಂಚರಿಸುತ್ತಿದ್ದು, ಶೀಘ್ರದಲ್ಲೇ ಇನ್ನೂ ನಾಲ್ಕು ಬಸ್‌ಗಳು ಸೇರ್ಪಡೆಯಾಗಲಿವೆ. ಇದರಿಂದ ಉಂಟಾಗುವ ತೊಂದರೆ ತಪ್ಪಿಸಲು ಪುರಸಭೆಯ ಮನವಿಯಂತೆ ತಾತ್ಕಾಲಿಕ ನಿಲುಗಡೆ ವ್ಯವಸ್ಥೆ ಮಾಡಲಾಗುವುದು ಎಂದು ರಾಜೇಶ್ ಶೆಟ್ಟಿ ಹೇಳಿದರು.