

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಆರೋಪಿಯಾಗಿದ್ದು, 5 ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮೂರ್ತಿ ಯಾನೆ ಪಿಂಟು(37) ಎಂಬಾತನನ್ನು ಪೊಲೀಸರು ಬೆಂಗಳೂರಿನಲ್ಲಿ ಬುಧವಾರ ಬಂಧಿಸಿದ್ದಾರೆ.
ಧರ್ಮಸ್ಥಳ ಠಾಣೆ ಸಿಬ್ಬಂದಿ ವೃಷಭ, ಚರಣ್‌ರಾಜ್ ಕಾರ್ಯಾಚರಣೆ ನಡೆಸಿದರು. ಆರೋಪಿಯನ್ನು ನ್ಯಾಯಾಧೀಶರ ಸಮ್ಮುಖ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.