ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಾಧನೆ ಶ್ಲಾಘನೀಯ

 ಎಸ್.ಆರ್.ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಚ್.ನಾಗರಾಜ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ವಿಠ್ಠಲ ಶೆಟ್ಟಿ, ವಾದಿರಾಜ ಶೆಟ್ಟಿ ಮತ್ತಿತರರು ಇದ್ದರು.
ಎಸ್.ಆರ್.ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಚ್.ನಾಗರಾಜ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ವಿಠ್ಠಲ ಶೆಟ್ಟಿ, ವಾದಿರಾಜ ಶೆಟ್ಟಿ ಮತ್ತಿತರರು ಇದ್ದರು.
Published on
ಹೆಬ್ರಿ: ಧರ್ಮಸ್ಥಳದ ವಿರುದ್ಧ ಅಪಪ್ರಚಾರ ವಾಡಿದವರು ತಲೆಮರಿಸಿಕೊಂಡಿದ್ದಾರೆ. ಇದು ದೇವರ ಅವತಾರ. ಹೆಬ್ರಿಯ ಅನೇಕ ದೇವಾಲಯಗಳಿಗೆ ಜೀರ್ಣೋದ್ಧಾರಕ್ಕೆ ಪೂಜ್ಯರು ಅನುದಾನ ಒದಗಿಸಿರುತ್ತಾರೆ. ಯೋಜನೆ ಮೂಲಕ ಅನೇಕರ ಜೀವನ ಬೆಳಗಿದೆ. ಸರ್ಕಾರ ವಾಡಲಾಗದಂತಹ ಸಾಧನೆಯನ್ನು ಯೋಜನೆ ವಾಡಿರುವುದು ಶ್ಲಾನೀಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾವಾಭಿವೃದ್ಧಿ ಯೋಜನೆ ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಹೇಳಿದರು.
ಹೆಬ್ರಿ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾವಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಚಾರ ಮತ್ತು ಹೆಬ್ರಿ ವಲಯ ಪ್ರಗತಿ ಬಂಧು ಸ್ವಸಹಾಯ ಸಂಗಳ ಒಕ್ಕೂಟ, ಜನಜಾಗೃತಿ ವೇದಿಕೆ, ಹೆಬ್ರಿ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಆಶ್ರಯದಲ್ಲಿ ಹೆಬ್ರಿ ತಾಣ ಅರ್ಧನಾರೀಶ್ವರ ದೇವಸ್ಥಾನ ವಠಾರದಲ್ಲಿ ನಡೆದ ದೀಪಾರಾಧನೆ, ಭಜನಾ ಮಹಾಸಂಗಮ ಮತ್ತು ಒಕ್ಕೂಟದ ವಾರ್ಷಿಕೋತ್ಸವದಲ್ಲಿ ವಾತನಾಡಿದರು.
ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಚ್.ನಾಗರಾಜ್ ಶೆಟ್ಟಿ ಉದ್ಘಾಟಿಸಿ ವಾತನಾಡಿದರು. ಸೀತಾನದಿ ವಿಠಲ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಕ್ಷೇತ್ರದ ಸಾಧಕರನ್ನು ಗೌರವಿಸಲಾಯಿತು.
ಉಡುಪಿ ಜಿಲ್ಲೆ ನಿರ್ದೇಶಕ ನಾಗರಾಜ ಶೆಟ್ಟಿ, ಹೆಬ್ರಿ ತಾಲೂಕು ಜನಜಾಗೃತಿ ವೇದಿಕೆ ಸಂಟನಾ ಅಧ್ಯಕ್ಷ ಚಾರ ವಾದಿರಾಜ ಶೆಟ್ಟಿ, ಹೆಬ್ರಿ ಗ್ರಾಪಂ ಅಧ್ಯಕ್ಷ ತಾರಾನಾಥ ಎಸ್.ಬಂಗೇರ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುವಾರ್, ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆನುವಂಶಿಕ ಮೊಕ್ತೇಸರ ಎಚ್.ತಾರನಾಥ್ ಬಲ್ಲಾಳ್, ಹೆಬ್ರಿ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಗೋಪಾಲ ಕುಲಾಲ್, ಚಾರ ವಲಯ ಅಧ್ಯಕ್ಷ ರಾಜೇಶ್ ಪೂಜಾರಿ, ಶೌರ್ಯ ವಿಪತ್ತು ನಿರ್ವಹಣಾ ಹೆಬ್ರಿ ಘಟಕದ ಸುರೇಶ್ ಭಂಡಾರಿ, ಚಾರದ ಚಂದ್ರ ನಾಯ್ಕ, ಪ್ರಮುಖರಾದ ಜ್ಯೋತಿ ಉದಯ್, ಶಾಲಿನಿ ಭಂಡಾರಿ, ಯೋಜನಾಧಿಕಾರಿ ಲೀಲಾವತಿ ಇತರರು ಇದ್ದರು.
ಮೇಲ್ವಿಚಾರಕರಾದ ಉಮೇಶ್, ಉದಯ್ ಕುಲಾಲ್ ನಿರೂಪಿಸಿದರು. ಯೋಜನಾಧಿಕಾರಿ ಲೀಲಾವತಿ ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net