ಯುಎಇ ಯಕ್ಷಗಾನ ಅಭ್ಯಾಸ ಕೇಂದ್ರ ವತಿಯಿಂದ ಡಾ.ಎಂ.ಮೋಹನ ಆಳ್ವ ಅವರಿಗೆ ಗೌರವಾಭಿನಂದನೆ ಸಲ್ಲಿಸಲಾಯಿತು. ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಸಂಚಾಲಕ ಕೊಟ್ಟಿಂಜ ದಿನೇಶ ಶೆಟ್ಟಿ, ಯಕ್ಷಗಾನ ಮೇಳಗಳ ಸಂಚಾಲಕ ಪಳ್ಳಿ ಕಿಶನ್ ಹೆಗ್ಡೆ, ಯಕ್ಷಗಾನ ಕಲಾರಂಗ ಕಾರ್ಯದರ್ಶಿ ಮುರಳಿ ಕಡೆಕಾರ್ ಹಾಗೂ ಯಕ್ಷಧ್ರುವ ಯಕ್ಷ ಶಿಕ್ಷಣದ ಪ್ರಧಾನ ಸಂಚಾಲಕ ವಾಸುದೇವ ಐತಾಳ್ ಮತ್ತಿತರರಿದ್ದರು.
Published on:
Copied
Follow Us
ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ
ಯಕ್ಷಗಾನ ಕೇವಲ ಮನರಂಜನೆಯ ಕಲೆಯಲ್ಲ, ಸೌಂದರ್ಯ ಪ್ರಜ್ಞೆ, ಸಂಸ್ಕೃತಿ, ಪರಿಸರ ಹಾಗೂ ಸಾಮರಸ್ಯದ ಬದುಕಿನ ಮೌಲ್ಯಗಳನ್ನು ಬೆಳೆಸುವ ಮಾಧ್ಯಮ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು.
ಯುಎಇ ಹಾಗೂ ಮಧ್ಯಪ್ರಾಚ್ಯದ ಮೊದಲ ಸಮಗ್ರ ಯಕ್ಷಗಾನ ಕಲಿಕಾ ಕೇಂದ್ರವಾಗಿರುವ ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ 11ನೇ ವರ್ಷದ ಅಂಗವಾಗಿ ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಮಂಗಳವಾರ ವಿದ್ಯಾಗಿರಿಯ ಆಳ್ವಾಸ್ ಕಾಲೇಜಿನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಆಯೋಜಿಸಿದ್ದ ಯಕ್ಷಗಾನ ಕಾರ್ಯಕ್ರಮ ಹಾಗೂ ಡಾ.ಎಂ.ಮೋಹನ ಆಳ್ವ ಅವರ 75ನೇ ಜನ್ಮಸಂವತ್ಸರದ ಗೌರವಾಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಸಂಚಾಲಕ ಕೊಟ್ಟಿಂಜ ದಿನೇಶ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಯಕ್ಷಗಾನ ಮೇಳಗಳ ಸಂಚಾಲಕ ಪಳ್ಳಿ ಕಿಶನ್ ಹೆಗ್ಡೆ, ಯಕ್ಷಗಾನ ಕಲಾರಂಗ ಕಾರ್ಯದರ್ಶಿ ಮುರಳಿ ಕಡೆಕಾರ್ ಹಾಗೂ ಯಕ್ಷಧ್ರುವ ಯಕ್ಷ ಶಿಕ್ಷಣದ ಪ್ರಧಾನ ಸಂಚಾಲಕ ವಾಸುದೇವ ಐತಾಳ್ ಮುಖ್ಯ ಅತಿಥಿಗಳಾಗಿದ್ದರು.
ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರ ಸಂಯೋಜಕ ಗುರುಪ್ರಸಾದ್ ಭಟ್ ಕಾರ್ಯಕ್ರಮ ನಿರೂಪಿಸಿದರು. ಶೇಖರ್ ಡಿ.ಶೆಟ್ಟಿಗಾರ್ ಕಿನ್ನಿಗೋಳಿ ವಿರಚಿತ ಮೋಹಿನಿ ಏಕಾದಶಿ ಪ್ರಸಂಗವನ್ನು ದುಬೈ ಹಾಗೂ ಯುಎಇ ಯಕ್ಷಗಾನ ಅಭ್ಯಾಸ ಕೇಂದ್ರದ ಹಿರಿಯ-ಕಿರಿಯ ಕಲಾವಿದರು ಪ್ರದರ್ಶಿಸಿದರು. ಶೇಖರ್ ಡಿ.ಶೆಟ್ಟಿಗಾರ್ ಕಿನ್ನಿಗೋಳಿ ನಿರ್ದೇಶನ ನೀಡಿದ್ದು, ಶರತ್ ಕುಡ್ಲ ನಾಟ್ಯ ಸಂಯೋಜನೆ ಮಾಡಿದ್ದರು.