ಕೃಷ್ಣ ವೇಷ ಸ್ಪರ್ಧೆಯಲ್ಲಿ ಕೃಷಿಕ ಪ್ರವೀಣ್ ಶೆಟ್ಟಿ ಹಾಗೂ ಪಿಎಚ್.ಡಿ ಪದವಿ ಪಡೆದ ಡಾ.ಹರ್ಷ ಅವರನ್ನು ಸನ್ಮಾನಿಸಲಾಯಿತು. ಕಟೀಲು ದೇವಳ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ, ಕೊಡೆತ್ತೂರು ಅರಸು ಕುಂಜಿರಾಯ ದೈವಸ್ಥಾನದ ದೇವಿಪ್ರಸಾದ್ ಶೆಟ್ಟಿ ಮತ್ತಿತರರಿದ್ದರು.
Published on:
Copied
Follow Us
ಕಿನ್ನಿಗೋಳಿ: ಮಕ್ಕಳಲ್ಲಿ ದೇವರನ್ನು ಕಾಣುವ ಸಂಸ್ಕೃತಿ ನಮ್ಮದು. ದೇವರ ಕುರಿತು ಮಕ್ಕಳಿಗೆ ತಿಳಿಸಿಕೊಡುವ ದೃಷ್ಟಿಯಿಂದ ಕೃಷ್ಣ ವೇಷ ಸ್ಪರ್ಧೆಗಳು ಪ್ರೇರಣೆಯಾಗಲಿ ಎಂದು ಕಸಾಪ ಮಾಜಿ ಅಧ್ಯಕ್ಷ ಡಾ.ಹರಿಕೃಷ್ಣ ಪುನರೂರು ಹೇಳಿದರು.
ಕೊಡೆತ್ತೂರು ದೇವಸ್ಯ ಮಠದಲ್ಲಿ ಕೃಷ್ಣ ವೇಷ ಸ್ಪರ್ಧೆ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದರು. ಐವತ್ತು ಎಕರೆಗೂ ಹೆಚ್ಚು ಭೂಮಿಯಲ್ಲಿ ಭತ್ತದ ಕೃಷಿ ಮಾಡುವ ಕೃಷಿಕ ಪ್ರವೀಣ್ ಶೆಟ್ಟಿ ಹಾಗೂ ಪಿಎಚ್.ಡಿ ಪದವಿ ಪಡೆದ ಡಾ.ಹರ್ಷ ಅವರನ್ನು ಸನ್ಮಾನಿಸಲಾಯಿತು.