ಸಾಹಿತ್ಯದಿಂದ ಭಾಷೆಯ ಬೆಳವಣಿಗೆ

 ಸುಳ್ಯದ ನೆಹರು ಸ್ಮಾರಕ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ವಿಚಾರಸಂಕಿರಣವನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್‌ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಉದ್ಘಾಟಿಸಿದರು. ಅಕ್ಷಯ್ ಕೆ.ಸಿ., ಡಾ.ಎನ್.ಎ.ಜ್ಞಾನೇಶ್, ಚಂದ್ರಶೇಖರ ಪೇರಾಲು, ಗೋಪಾಲ ಪೆರಾಜೆ ಮತ್ತಿತರರಿದ್ದರು.
ಸುಳ್ಯದ ನೆಹರು ಸ್ಮಾರಕ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ವಿಚಾರಸಂಕಿರಣವನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್‌ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಉದ್ಘಾಟಿಸಿದರು. ಅಕ್ಷಯ್ ಕೆ.ಸಿ., ಡಾ.ಎನ್.ಎ.ಜ್ಞಾನೇಶ್, ಚಂದ್ರಶೇಖರ ಪೇರಾಲು, ಗೋಪಾಲ ಪೆರಾಜೆ ಮತ್ತಿತರರಿದ್ದರು.
Published on
ಸುಳ್ಯ: ನಮ್ಮ ಭಾಷೆಗಳು ನಶಿಸಿ ಹೋಗದಂತೆ ಉಳಿಸಿ ಬೆಳೆಸಿ ಅಭಿವೃದ್ಧಿ ಪಡಿಸಬೇಕು. ಭಾಷೆಯ ಬೆಳವಣಿಗೆಗೆ ಸಾಹಿತ್ಯವನ್ನು ಪ್ರೋತ್ಸಾಹಿಸಬೇಕು. ಅರೆಭಾಷೆ ಅಕಾಡೆಮಿ ಸ್ಥಾಪನೆಯಾದ ಬಳಿಕ ಭಾಷೆಯ ವೈಭವ ಹೆಚ್ಚಿದೆ ಎಂದು ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್‌ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅಭಿಪ್ರಾಯಪಟ್ಟರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಸುಳ್ಯದ ನೆಹರು ಸ್ಮಾರಕ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ಪ್ರಯುಕ್ತ ಕೆವಿಜಿ ಷಷ್ಟೃಬ್ದ ರಂಗಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ಅರೆಭಾಷೆ ರಾಷ್ಟ್ರೀಯ ವಿಚಾರಸಂಕಿರಣ ಉದ್ಘಾಟಿಸಿ ಮಾತನಾಡಿದರು.
ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಅರೆಭಾಷೆ ರಾಜ್ಯದ ಗಡಿ ಮೀರಿ ದೇಶದೆಲ್ಲೆಡೆ ಪಸರಿಸಬೇಕು ಎಂಬುದು ಅಕಾಡೆಮಿ ಆಶಯ. ಅದಕ್ಕಾಗಿ ಹಲವಾರು ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.
ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್‌ನ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ., ಅಕಾಡೆಮಿ ಸದಸ್ಯರಾದ ಡಾ.ಎನ್.ಎ.ಜ್ಞಾನೇಶ್, ಚಂದ್ರಶೇಖರ ಪೇರಾಲು, ಗೋಪಾಲ ಪೆರಾಜೆ, ಚಂದ್ರಾವತಿ ಬಡ್ಡಡ್ಕ, ಕುದ್ಪಾಜೆ ಪ್ರಕಾಶ್, ತೇಜಕುಮಾರ್, ಲತಾ ಪ್ರಸಾದ್, ನೆಹರು ಸ್ಮಾರಕ ಪದವಿ ಕಾಲೇಜು ಪ್ರಾಂಶುಪಾಲ ಡಾ.ಎಂ.ಎಂ.ರುದ್ರಕುಮಾರ್, ಪಪೂ ಕಾಲೇಜು ಪ್ರಾಂಶುಪಾಲೆ ಮಿಥಾಲಿ ಪಿ.ರೈ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ.ಟಿ.ವಿಶ್ವನಾಥ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಸದಸ್ಯ ಸಂಚಾಲಕ ಚಂದ್ರಶೇಖರ ಪೇರಾಲು ಸ್ವಾಗತಿಸಿದರು. ಪ್ರಾಂಶುಪಾಲ ಡಾ.ರುದ್ರಕುಮಾರ್ ಎಂ.ಎಂ.ವಂದಿಸಿದರು. ಉಪನ್ಯಾಸಕಿ ಡಾ.ಅನುರಾಧಾ ಕುರುಂಜಿ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net