ಮೀನುಗಾರಿಕೆ, ಆರೋಗ್ಯ, ಶಿಕ್ಷಣ, ಬ್ಯಾಂಕಿಂಗ್, ಕೈಗಾರಿಕಾ ಕ್ಷೇತ್ರದಲ್ಲಿ ದಿನೇದಿನೆ ಬೆಳೆಯುತ್ತಿರುವ ಉಡುಪಿ ಜಿಲ್ಲೆಗೆ ಆಧುನಿಕ ಸೌಲಭ್ಯಗಳ ಅಗ್ನಿಶಾಮಕ ದಳ ಅತ್ಯಂತ ಅಗತ್ಯವಾಗಿದೆ. ರಾಜ್ಯ ಸರ್ಕಾರ ಮೊನ್ನೆ ಉಡುಪಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕೋಟ್ಯಂತರ ರೂ. ನಷ್ಟ ಅನುಭವಿಸಿದ ಅಂಗಡಿ ಮಾಲೀಕರಿಗೆ ತಕ್ಷಣ ಗರಿಷ್ಠ ಪರಿಹಾರ ನೀಡಬೇಕು. ಇನ್ನಾದರೂ ಉಡುಪಿ ಜಿಲ್ಲೆಯ ಬಗ್ಗೆ ನಿರ್ಲಕ್ಷ್ಯ ಧೋರಣೆ ಕೈಬಿಟ್ಟು ಕೇವಲ ಗ್ಯಾರಂಟಿ ಯೋಜನೆಗಳನ್ನೇ ನೆಚ್ಚಿಕೊಳ್ಳದೆ ಅಗ್ನಿಶಾಮಕ ದಳದಂತಹ ಅತ್ಯಗತ್ಯ ತುರ್ತು ಸೇವೆ ಒದಗಿಸಲು ವಿಶೇಷ ಆದ್ಯತೆ ನೀಡಬೇಕು. ಸಾರ್ವಜನಿಕರ ಜೀವ ಹಾಗೂ ಆಸ್ತಿ-ಪಾಸ್ತಿ ರಕ್ಷಣೆಗೆ ಮುಂದಾಗಬೇಕು ಎಂದು ಶಾಸಕ ಯಶ್ಪಾಲ್ ಸುವರ್ಣ ಆಗ್ರಹಿಸಿದ್ದಾರೆ.