ಉಡುಪಿ ಜಿಲ್ಲೆಯಲ್ಲೇ ಪ್ರಥಮ ಲಿವರ್​ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ

ಮಾಹೆ ಬೋಧನಾ ಆಸ್ಪತ್ರೆಗಳ ಸಿಒಒ ಡಾ. ಸುಧಾಕರ್​ ಕಂಟಿಪುಡಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಮಾಹೆ ಬೋಧನಾ ಆಸ್ಪತ್ರೆಗಳ ಸಿಒಒ ಡಾ. ಸುಧಾಕರ್​ ಕಂಟಿಪುಡಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
Published on

ಉಡುಪಿ: ಜಿಲ್ಲೆಯ ವೈದ್ಯಕಿಯ ಇತಿಹಾಸದಲ್ಲಿ ಹೊಸ ದಾಖಲೆ ನಿಮಾರ್ಣವಾಗಿದ್ದು, ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಬೆಂಗಳೂರು ಮಣಿಪಾಲ್​ ಆಸ್ಪತ್ರೆ ಸಹಯೋಗದೊಂದಿಗೆ ಸ್ಥಾಪಿಸಲಾದ ಮಣಿಪಾಲ ಇಂಟಿಗ್ರೇಟೆಡ್​ ಲಿವರ್​ ಆ್ಯಂಡ್​ ಟ್ರಾನ್ಸ್​ಪ್ಲಾಂಟ್​ ಕ್ಲಿನಿಕ್​ನಲ್ಲಿ ಮೊದಲ ಬಾರಿಗೆ ಮೃತ ದಾನಿ ಯಕೃತ್ತು (ಲಿವರ್​) ಡೆದು ದೀರ್ಘಕಾಲದ ಯಕೃತ್​ ಕಾಯಿಲೆ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕುಂದಾಪುರ ಮೂಲದ 56 ವರ್ಷದ ವ್ಯಕ್ತಿಗೆ ಕಸಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸುವ ಮೂಲಕ ಸುಧಾರಿತ ವೈದ್ಯಕಿಯ ಸೇವೆಯಲ್ಲಿ ಕ್ರಾಂತಿ ಮಾಡಲಾಗಿದೆ ಎಂದು ಮಾಹೆ ಬೋಧನಾ ಆಸ್ಪತ್ರೆಗಳ ಸಿಒಒ ಡಾ. ಸುಧಾಕರ್​ ಕಂಟಿಪುಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲೆಯ ಜನರಿಗೆ ಸುಧಾರಿತ ಚಿಕಿತ್ಸೆಯನ್ನು ಮನೆಬಾಗಿಲಿಗೆ ತಲುಪಿಸುವ ಗುರಿ ಯಶಸ್ವಿಯಾಗಿದೆ. ಕೇವಲ ಚಿಕಿತ್ಸೆಯ ಗುಣಮಟ್ಟದ ಮೇಲೆ ಮಾತ್ರವಲ್ಲದೆ, ಅದನ್ನು ಜನ ಸಾಮಾನ್ಯರಿಗೆ ಕೈಗೆಟುಕುವಂತೆ ಮಾಡುವಲ್ಲಿಯೂ ಗಮನ ಹರಿಸಿದ್ದೇವೆ. ಪ್ರಮುಖ ವಿಮಾ ಕಂಪನಿಗಳು ಮತ್ತು ಸರ್ಕಾರದ ಆರೋಗ್ಯ ಯೋಜನೆಗಳ ಅಡಿಯಲ್ಲಿ ಅರ್ಹ ರೋಗಿಗಳು ಈ ಕಸಿ ಚಿಕಿತ್ಸೆಯ ಪ್ರಯೋಜನ ಪಡೆಯಬಹುದು ಎಂದು ಮಾಹಿತಿ ನೀಡಿದರು.

ಗ್ಯಾಸ್ಟ್ರೊಎಂಟರಾಲಜಿ ವಿಭಾಗದ ಡಾ. ಶಿರನ್​ ಶೆಟ್ಟಿ ಮಾತನಾಡಿ, 4 ವರ್ಷದ ಹಿಂದೆ ರೋಗಿಯ ಪ್ರಾಥಮಿಕ ತಪಾಸಣೆ ನಡೆಸಲಾಗಿತ್ತು. ನಂತರದ ದಿನಗಳಲ್ಲಿ ನಿರಂತರ ಚಿಕಿತ್ಸೆ ಪಡೆಯುತ್ತಿದ್ದು, 2 ತಿಂಗಳ ಹಿಂದೆ ಕಸಿ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಇದೀಗ ಅವರು ಆರೋಗ್ಯವಾಗಿದ್ದಾರೆ. ಮೊದಲು ಲಿವರ್​ ಕಸಿಗಾಗಿ ರೋಗಿಗಳು ಬೆಂಗಳೂರಿನಂತಹ ದೂರದ ನಗರಗಳಿಗೆ ಹೋಗಬೇಕಿತ್ತು. ಆದರೆ ಈಗ ಮಣಿಪಾಲದಲ್ಲೇ ಈ ಸೌಲಭ್ಯ ದೊರೆಯುತ್ತಿರುವುದರಿಂದ ತುರ್ತು ಸಮಯದಲ್ಲಿ ರೋಗಿಗಳಿಗೆ ಅನುಕೂಲವಾಗಲಿದೆ ಎಂದರು.

ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಯ ತಜ್ಞ ವೈದ್ಯ ಡಾ. ಜಯಂತ್​ ರೆಡ್ಡಿ, ಕಸ್ತೂರ್ಬಾ ಆಸ್ಪತ್ರೆಯ ಡಾ. ಭರತ್​ ಕುಮಾರ್​ ಭಟ್​, ಆಸ್ಪತ್ರೆಯ ವೈದ್ಯಕಿಯ ಅಧೀಕ್ಷಕ ಡಾ. ಅವಿನಾಶ್​ ಶೆಟ್ಟಿ, ಡಾ. ದೀಪ್ತಿ ರಾಮಚಂದ್ರ, ಗುಣಮುಖರಾದ ರೋಗಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net