ಘಟಕದ ಅಧ್ಯಕ್ಷ ಸುರೇಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ಉದ್ಯಮಿ ಶ್ರೀಪತಿ ಭಟ್, ಸುಜೀರ್ ಗುತ್ತು ಐತಪ್ಪ ಆಳ್ವ, ತಿಮ್ಮಯ್ಯ ಶೆಟ್ಟಿ, ಎಂ.ಸಿ.ಎಸ್. ಬ್ಯಾಂಕ್ ಅಧಿಕಾರಿ ಚಂದ್ರಶೇಖರ ಎಂ., ಪುರಸಭಾ ಸದಸ್ಯೆ ಮಮತಾ ಆನಂದ್, ಕೋಟೆಬಾಗಿಲು ಶ್ರೀ ಮಹಮ್ಮಾಯಿ ದೇವಸ್ಥಾನದ ಸೇವಾ ಸಮಿತಿಯ ಅಧ್ಯಕ್ಷ ರಾಜೇಶ್ ಕೋಟೆಗಾರ್, ನಡ್ಯೋಡಿ ದೈವಸ್ಥಾನದ ಸೇವಾ ಸಮಿತಿಯ ಅಧ್ಯಕ್ಷ ಗೋಪಾಲ ಪೂಜಾರಿ, ಚೇತನಾ ರಾಜೇಂದ್ರ ಹೆಗ್ಡೆ, ಶುಭ ಹಾರೈಸಿದರು. ಗೌರವಾಧ್ಯಕ್ಷ ಮಹಮ್ಮದ್ ಹನೀಫ್ ಉಪಸ್ಥಿತರಿದ್ದರು.