ವಿಶ್ವಾಸದ ಸಹಕಾರಿ ಸಂಘದ ಬೆಳವಣಿಗೆ

 ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಒಕ್ಕೂಟ ನಿರ್ದೇಶಕ ಡಾ.ಐಕಳಬಾವ ದೇವಿ ಪ್ರಸಾದ್ ಶೆಟ್ಟಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿದರು. ಪಡುಬಿದ್ರಿ ವ್ಯವಸಾಯ ಸೇವಾ ಸಹಕಾರಿ ಸಂಘ ಅಧ್ಯಕ್ಷ ವೈ.ಸುಧೀರ್ ಕುಮಾರ್, ಹಳೆಯಂಗಡಿ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ವಸಂತ್ ಬೆರ್ನಾಡ್ ಇದ್ದರು.
ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಒಕ್ಕೂಟ ನಿರ್ದೇಶಕ ಡಾ.ಐಕಳಬಾವ ದೇವಿ ಪ್ರಸಾದ್ ಶೆಟ್ಟಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿದರು. ಪಡುಬಿದ್ರಿ ವ್ಯವಸಾಯ ಸೇವಾ ಸಹಕಾರಿ ಸಂಘ ಅಧ್ಯಕ್ಷ ವೈ.ಸುಧೀರ್ ಕುಮಾರ್, ಹಳೆಯಂಗಡಿ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ವಸಂತ್ ಬೆರ್ನಾಡ್ ಇದ್ದರು.
Published on
ವಿಜಯವಾಣಿ ಸುದ್ದಿಜಾಲ ಹಳೆಯಂಗಡಿ
ಪ್ರಾಮಾಣಿಕ ಸೇವೆ, ವಿಶ್ವಾಸಾರ್ಹತೆ, ಸಮಾಜಮುಖಿ ತತ್ವ ಆಚರಣೆಗಳು ಸಹಕಾರಿ ಸಂಸ್ಥೆಯನ್ನು ಶಾಶ್ವತವಾಗಿ ಉನ್ನತಿಗೆ ತರುತ್ತದೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಾಗೂ ಬೆಂಗಳೂರು ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ ನಿರ್ದೇಶಕ ಡಾ.ಐಕಳಬಾವ ದೇವಿ ಪ್ರಸಾದ್ ಶೆಟ್ಟಿ ಹೇಳಿದರು.
ದ.ಕ. ಜಿಲ್ಲೆ ಸಹಕಾರ ಇಲಾಖೆ ನೇತೃತ್ವದಲ್ಲಿ ಹಳೆಯಂಗಡಿ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ ಆಶ್ರಯದಲ್ಲಿ ಕೇಂದ್ರ ಸಹಕಾರ ಇಲಾಖೆ 5 ವರ್ಷ ಪೂರ್ಣಗೊಂಡ ಪ್ರಯುಕ್ತ ‘ಸಹಕಾರ ಸಪ್ತಾಹ’ದ ಅಂಗವಾಗಿ ಮೂಲ್ಕಿ ತಾಲೂಕುಮಟ್ಟದ ಸಹಕಾರ ಸಂಘಗಳ ನಿರ್ದೇಶಕರು, ಸಿಬ್ಬಂದಿಗೆ ಸಹಕಾರ ಸಂಘಗಳ ನಿರ್ವಹಣೆಯಲ್ಲಿ ನಮ್ಮ ಪಾತ್ರದ ಬಗ್ಗೆ ನಡೆದ ತರಬೇತಿ ಕಾರ್ಯಾಗಾರವನ್ನು ಬುಧವಾರ ಹಳೆಯಂಗಡಿ ಹರಿಓಂ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಪಡುಬಿದ್ರಿ ವ್ಯವಸಾಯ ಸೇವಾ ಸಹಕಾರಿ ಸಂಘ ಅಧ್ಯಕ್ಷ ವೈ.ಸುಧೀರ್ ಕುಮಾರ್ ಮಾತನಾಡಿದರು. ಹಳೆಯಂಗಡಿ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ವಸಂತ್ ಬೆರ್ನಾಡ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರ ಹಾಗೂ ಕರ್ನಾಟಕ ಸಹಕಾರ ಸಂಘಗಳ ತರಬೇತಿದಾರ, ವಕೀಲ ಶ್ರೀಧರ್ ಪಿ.ಎಸ್. ಮೂಲ್ಕಿ ತಾಲೂಕುಮಟ್ಟದ ಸಹಕಾರ ಸಂಘಗಳ ನಿರ್ದೇಶಕರು, ಸಿಬ್ಬಂದಿಗೆ ಕಾರ್ಯಾಗಾರ ನಡೆಸಿಕೊಟ್ಟರು.
ಸ್ವಸಹಾಯ ಸಂಘದ ಪ್ರೇರಕಿ ನೀತು ನಿರಂಜಲ ಪ್ರಾರ್ಥಿಸಿದರು. ಸೊಸೈಟಿ ಅಧ್ಯಕ್ಷ ಎಚ್.ವಸಂತ್ ಬೆರ್ನಾಡ್ ಸ್ವಾಗತಿಸಿದರು. ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ವಂದಿಸಿದರು. ಲೆಕ್ಕಿಗ ಲೋಲಾಕ್ಷಿ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net