ದಂಡ ಪಾವತಿಸದಿದ್ದರೆ ಒಂದು ವರ್ಷ ಹೆಚ್ಚುವರಿ ಸಜೆ ಅನುಭವಿಸಬೇಕೆಂದು ತೀರ್ಪಿನಲ್ಲಿ ತಿಳಿಸಲಾಗಿದೆ. ಚಿತ್ತಾರಿಕ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ ಪ್ರದೇಶದ 7ರ ಹರೆಯದ ಬಾಲಕಿಗೆ 2023ರಿಂದ ವಿವಿಧ ದಿನಗಳಲ್ಲಿ ಲೈಂಗಿಕ ಕಿರುಕುಳ ನೀಡಿದ ದೂರಿನಂತೆ ಚಿತ್ತಾರಿಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಅಂದಿನ ಇನ್‌ಸ್ಪೆಕ್ಟರ್ ರಂಜಿತ್ ರವೀಂದ್ರನ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.