ಪತ್ರಿಕೆ ಏಳಿಗೆಯಲ್ಲಿ ವಿತರಕರ ಶ್ರಮ ಮಹತ್ವದ್ದು

 ನಾಯ್ಕಪುವಿನಲ್ಲಿ ನಡೆದ ಕನ್ನಡ ಪತ್ರಿಕಾ ದಿನಾಚರಣೆಯಲ್ಲಿ ಶ್ಯಾಮಪ್ರಸಾದ್ ನೀರ್ಚಾಲು ಅವರಿಗೆ ಪ್ರಶಸ್ತಿ ಪ್ರದಾನಿಸಲಾಯಿತು. ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಎ.ಆರ್ ಸುಬ್ಬಯ್ಯಕಟ್ಟೆ, ರವಿ ನಾಯ್ಕಾಪು, ಪೃಥ್ವಿರಾಜ್ ಶೆಟ್ಟಿ ಇತರರಿದ್ದರು.
ನಾಯ್ಕಪುವಿನಲ್ಲಿ ನಡೆದ ಕನ್ನಡ ಪತ್ರಿಕಾ ದಿನಾಚರಣೆಯಲ್ಲಿ ಶ್ಯಾಮಪ್ರಸಾದ್ ನೀರ್ಚಾಲು ಅವರಿಗೆ ಪ್ರಶಸ್ತಿ ಪ್ರದಾನಿಸಲಾಯಿತು. ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಎ.ಆರ್ ಸುಬ್ಬಯ್ಯಕಟ್ಟೆ, ರವಿ ನಾಯ್ಕಾಪು, ಪೃಥ್ವಿರಾಜ್ ಶೆಟ್ಟಿ ಇತರರಿದ್ದರು.
Published on
ವಿಜಯವಾಣಿ ಸುದ್ದಿಜಾಲ ಕಾಸರಗೋಡು
ಪತ್ರಿಕಾ ಮಾಧ್ಯಮ ನಿಖರತೆ ಮತ್ತು ವಿಶ್ವಾಸಾರ್ಹತೆ ಉಳಿಸಿಕೊಳ್ಳುವಲ್ಲಿ ಇಂದಿಗೂ ಯಶಸ್ವಿಯಾಗಿದ್ದು, ಪತ್ರಿಕೆ ಖರೀದಿಸಿ ಓದುವ ಮನೋಭಾವ ಬೆಳೆಸಿಕೊಂಡಾಗ ಪತ್ರಿಕಾರಂಗ ಬೆಳೆಯಲು ಸಾಧ್ಯ. ಪತ್ರಿಕೆಗಳ ಉನ್ನತಿಯಲ್ಲಿ ಪತ್ರಿಕಾ ವಿತರಕರ ಪಾತ್ರ ಮಹತ್ವದ್ದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಟಕ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಹೇಳಿದರು.
ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂದ ಕಾಸರಗೋಡು ಜಿಲ್ಲಾ ಟಕ ವತಿಯಿಂದ ನಾಯ್ಕಾಪು ಲಿಟ್ಲ್ ಲಿಲ್ಲಿ ಆಂಗ್ಲ ವಾಧ್ಯಮ ಶಾಲಾ ಸಭಾಂಗಣದಲ್ಲಿ ಬುಧವಾರ ಕನ್ನಡ ಪತ್ರಿಕಾ ದಿನಾಚರಣೆ ಹಾಗೂ ಪತ್ರಿಕಾ ದಿನ ಪ್ರಶಸ್ತಿ ವಿತರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂದ ಅಧ್ಯಕ್ಷ ರವಿ ನಾಯ್ಕಾಪು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕಾಸರಗೋಡು ಬ್ಲಾಕ್ ಪಂಚಾಯಿತಿ ಸದಸ್ಯ ಪೃಥ್ವಿರಾಜ್ ಶೆಟ್ಟಿ ಭಾಗವಹಿಸಿದ್ದರು. ಸಾಹಿತಿ ವಿ.ಬಿ.ಕುಳಮರ್ವ ಪತ್ರಿಕಾ ದಿನದ ಸಂದೇಶ ನೀಡಿದರು.
ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಎ.ಆರ್.ಸುಬ್ಬಯ್ಯಕಟ್ಟೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂದ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ರಾಧಾಕೃಷ್ಣ ಉಳಿಯತ್ತಡ್ಕ, ಶಾಲಾ ಆಡಳಿತ ಮಂಡಳಿ ಅಧಕ್ಷೆ ಸರಸ್ವತಿ ಎ., ನಿವೃತ್ತ ಪ್ರಾಂಶುಪಾಲ ಪ್ರೊ.ಎ.ಶ್ರೀನಾಥ್, ಜಿಪಂ ಸದಸ್ಯ ರಾಮಪ್ಪ ಮಂಜೇಶ್ವರ, ರಾವ ಚೇರಾಲ್, ಟಿ.ಶಂಕರನಾರಾಯಣ ಭಟ್, ವಕೀಲ ಥಾಮಸ್ ಡಿಸೋಜ, ಪ್ರೊ.ಪಿ.ಎನ್.ಮೂಡಿತ್ತಾಯ ಮೊದಲಾದವರು ಉಪಸ್ಥಿತರಿದ್ದರು.
ಪ್ರಮೀಳಾ ಪ್ರಾರ್ಥಿಸಿದರು. ಗಂಗಾಧರ ತೆಕ್ಕೆಮೂಲೆ ಸ್ವಾಗತಿಸಿದರು. ಪುರುಷೋತ್ತಮ ಪೆರ್ಲ ವಂದಿಸಿದರು. ಪುರುಷೋತ್ತಮ ಭಟ್ ಕಾರ್ಯಕ್ರಮ ನಿರೂಪಿಸಿದರು. ಹುಸೈನ್ ಕುಬಣೂರು ಅವರಿಂದ ಮಿಮಿಕ್ರಿ ಕಾರ್ಯಕ್ರಮ ನಡೆಯಿತು.

ಪ್ರಶಸ್ತಿ ಪ್ರದಾನ, ಗೌರವಾರ್ಪಣೆ

ಹಿರಿಯ ಪತ್ರಿಕಾ ವಿತರಕ ಶ್ಯಾಮಪ್ರಸಾದ್ ನೀರ್ಚಾಲು ಅವರಿಗೆ ಪತ್ರಿಕಾ ದಿನ ಪ್ರಶಸ್ತಿ ಪ್ರದಾನಿಸಿ ಗೌರವಿಸಲಾಯಿತು. ಕಾಸರಗೋಡು ಜಿಲ್ಲಾ ಪಂಚಾಯಿತಿ ಸದಸ್ಯ ಸೋಮಶೇಖರ ಜೆ.ಎಸ್. ಪ್ರಶಸ್ತಿ ಪ್ರದಾನಿಸಿದರು. ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾದ ಹಾರ್ದಿಕ್ ಅವರನ್ನು ಗೌರವಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net