ಗಾಯಾಳು ಬಾಲಕ ಸಾವು

ಮೃತ ಬಾಲಕ ದಿಯಾನ್
ಮೃತ ಬಾಲಕ ದಿಯಾನ್
Published on
ಬೆಳ್ತಂಗಡಿ: ಬೆಳಾಲು ಗ್ರಾಮದ ಮಿನಂದೇಲು ಬಳಿ ಜೂ.12ರಂದು ನಡುರಸ್ತೆಯಲ್ಲಿ ಸ್ಕೂಟರ್ ಹೊತ್ತಿ ಉರಿದು ಗಂಭೀರ ಗಾಯಗೊಂಡಿದ್ದ ಬಾಲಕ ದಿಯಾನ್(7) ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮೃತಪಟ್ಟಿದ್ದಾನೆ.
ತಂದೆ ಬೆಳಾಲು ನಿವಾಸಿ, ಮಾಜಿ ಸೈನಿಕ ಮೋಹನ್ ಗೌಡ ಕಾಡಂಡ ಜತೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ತಾಂತ್ರಿಕ ದೋಷ ಕಾಣಿಸಿಕೊಂಡು ಸ್ಕೂಟರ್‌ಗೆ ಬೆಂಕಿ ಹತ್ತಿಕೊಂಡು ಬಾಲಕನಿಗೆ ಗಂಭೀರ ಸುಟ್ಟ ಗಾಯವಾಗಿತ್ತು. ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮೋಹನ್ ಗೌಡ ಅವರಿಗೂ ಗಾಯವಾಗಿದ್ದು ಚೇತರಿಸಿಕೊಂಡಿದ್ದಾರೆ. ಮೃತ ಬಾಲಕ ಉಜಿರೆ ಖಾಸಗಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಯಾಗಿದ್ದನು. ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾನೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net