ಬೂಡ ಮಾಜಿ ಅಧ್ಯಕ್ಷ ಪಿಯೂಸ್ ಎಲ್.ರೋಡ್ರಿಗಸ್ ಮಾತನಾಡಿದರು. ಜಿಪಂ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಬೂಡ ಅಧ್ಯಕ್ಷ ಬೇಬಿ ಕುಂದರ್, ಜೋತಿಷಿ ಅನಿಲ್ ಪಂಡಿತ್, ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಸ್ಥಾನದ ಅಧ್ಯಕ್ಷ ಬಿ.ಮೋಹನ್, ದ.ಕ. ಗ್ಯಾರೇಜು ಮಾಲೀಕರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಜನಾರ್ದನ ಅತ್ತಾವರ, ಕೆಎಸ್‌ಟಿಎ ರಾಜ್ಯಾಧ್ಯಕ್ಷ ಸುರೇಶ್ ಸಾಲ್ಯಾನ್, ಸಂಘದ ನೂತನ ಅಧ್ಯಕ್ಷ ಗಣೇಶ್ ಸುವರ್ಣ, ನಿರ್ಗಮನ ಅಧ್ಯಕ್ಷ ಸುಧೀರ್ ಪೂಜಾರಿ, ಕಾರ್ಯದರ್ಶಿ ಉಮೇಶ್ ಶೆಟ್ಟಿ, ಕೋಶಾಧಿಕಾರಿ ರಮೇಶ್ ಭಂಡಾರಿ ಉಪಸ್ಥಿತರಿದ್ದರು.