ಮಂಗಳೂರಿನಲ್ಲಿ 5 ಎಕ್ರೆ ಜಾಗದಲ್ಲಿ ಕಾಂಗ್ರೆಸ್​ ತರಬೇತಿ ಕೇಂದ್ರ: ಭಂಡಾರಿ

ಕಾರ್ಯಕ್ರಮದಲ್ಲಿ ನಿಕಟಪೂರ್ವ ಕಾಂಗ್ರೆಸ್​ ಜಿಲ್ಲಾ ಅಧ್ಯಕ್ಷ ಅಶೋಕ್​ ಕುಮಾರ್​ ಕೊಡವೂರು ನೂತನ ಅಧ್ಯಕ್ಷ ಕೊಳ್ಳಬೈಲು ಕಿಶನ್​ ಹೆಗ್ಡೆ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಕಾರ್ಯಕ್ರಮದಲ್ಲಿ ನಿಕಟಪೂರ್ವ ಕಾಂಗ್ರೆಸ್​ ಜಿಲ್ಲಾ ಅಧ್ಯಕ್ಷ ಅಶೋಕ್​ ಕುಮಾರ್​ ಕೊಡವೂರು ನೂತನ ಅಧ್ಯಕ್ಷ ಕೊಳ್ಳಬೈಲು ಕಿಶನ್​ ಹೆಗ್ಡೆ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
Published on
ಉಡುಪಿ: ಮಂಗಳೂರು ನಗರದಲ್ಲಿ 5 ಎಕರೆ ಜಾಗವನ್ನು ಕೆಪಿಸಿಸಿಗೆ ಮಂಜೂರು ಮಾಡಲು ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಯುವಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ಕಾಂಗ್ರೆಸ್​ ತರಬೇತಿ ಕೇಂದ್ರವನ್ನು ಸ್ಥಾಪಿಸಲು ಯೋಜಿಸಲಾಗಿದೆ ಎಂದು ವಿಪ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿದರು.
ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್​ ಕಚೇರಿಯಲ್ಲಿ ನಡೆದ ಉಡುಪಿ ಕಾಂಗ್ರೆಸ್​ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.

ದಿ. ಆಸ್ಕರ್​ ಫರ್ನಾಂಡಿಸ್​ ನೆನಪಿನಲ್ಲಿ ಪಡುಬಿದ್ರಿಯಲ್ಲಿ ಆಧುನಿಕ ಕಬಡ್ಡಿ ಕ್ರೀಡಾಂಗಣ ನಿರ್ಮಿಸಲು 5 ಕೋಟಿ ರೂ. ಅನುದಾನ ನೀಡುವಂತೆ ಹಾಗೂ ಬ್ರಹ್ಮಾವರದಲ್ಲಿರುವ ಕೃಷಿ ಕಾಲೇಜನ್ನು ಬಿ.ಎಸ್ಸಿ ಕೃಷಿ ಪದವಿ ಮಟ್ಟಕ್ಕೆ ಮೇಲ್ದರ್ಜೆಗೇರಿಸಲು ಹಾಗೂ ಕುಂದಾಪುರದಲ್ಲಿ ಮೆಡಿಕಲ್​ ಕಾಲೇಜು ಸ್ಥಾಪನೆ ಕುರಿತು ಸರ್ಕಾರದ ಗಮನ ಸೆಳೆಯಲಾಗಿದೆ. ಕರಾವಳಿ ಭಾಗದ ಸಮಗ್ರ ಅಭಿವೃದ್ಧಿ, ಶಿಕ್ಷಣ, ಕ್ರೀಡೆ ಹಾಗೂ ಪ್ರವಾಸೋದ್ಯಮ ಕ್ಷೇತ್ರಕ್ಕೆ ಉತ್ತೇಜನ ನೀಡುವ ಹಲವು ಮಹತ್ವಾಕಾಂಕ್ಷಿ ಯೋಜನೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದ್ದು, ಸಚಿವ ಸಂಪುಟದ ಸಭೆಯಲ್ಲಿ ಸೂಕ್ತ ತೀಮಾರ್ನ ಕೈಗೊಳ್ಳುವ ಭರವಸೆ ಸಿಕ್ಕಿದೆ ಎಂದು ಮಾಹಿತಿ ನೀಡಿದರು.
ಕಾಂಗ್ರೆಸ್​ ಪಕ್ಷದ 148 ವರ್ಷಗಳ ಇತಿಹಾಸದಲ್ಲೇ ಮೊದಲ ಬಾರಿಗೆ ನಾಯಕರ ತೀಮಾರ್ನಕ್ಕೆ ಸೀಮಿತವಾಗದೆ, ಕಾರ್ಯಕರ್ತರ ಅಭಿಪ್ರಾಯವನ್ನು ಪಡೆದು ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷರ ಆಯ್ಕೆ ಮಾಡಲಾಗಿದೆ. ರಾಜ್ಯದ 35 ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷರ ನೇಮಕದಲ್ಲಿ ಸಾಮಾಜಿಕ ನ್ಯಾಯವನ್ನು ಸಂಪೂರ್ಣವಾಗಿ ಪರಿಗಣಿಸಲಾಗಿದೆ. ಕಾರ್ಯಕರ್ತರ ನಿರ್ಧಾರಕ್ಕೇ ಹೆಚ್ಚಿನ ಮಹತ್ವ ನೀಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ನಿಕಟಪೂರ್ವ ಕಾಂಗ್ರೆಸ್​ ಜಿಲ್ಲಾ ಅಧ್ಯಕ್ಷ ಅಶೋಕ್​ ಕುಮಾರ್​ ಕೊಡವೂರು ನೂತನ ಅಧ್ಯಕ್ಷ ಕೊಳ್ಳಬೈಲು ಕಿಶನ್​ ಹೆಗ್ಡೆ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್​ ಕುಮಾರ್​ ಸೊರಕೆ, ಮಾಜಿ ಸಂಸದ ಜಯಪ್ರಕಾಶ್​ ಹೆಗ್ಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್​, ಮಾಜಿ ಶಾಸಕ ಗೋಪಾಲ್​ ಪೂಜಾರಿ, ಉಡುಪಿ ಬ್ಲಾಕ್​ ಕಾಂಗ್ರೆಸ್​ ಸಮಿತಿಯ ಅಧ್ಯಕ್ಷ ರಮೇಶ್​ ಕಾಂಚನ್​, ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್​ ಕಿಣಿ, ಕಾಂಗ್ರೆಸ್​ ಮುಖಂಡರಾದ ಹರಿಪ್ರಸಾದ್​ ರೈ, ಪ್ರಸಾದ್​ ರಾಜ್​ ಕಾಂಚನ್​, ವೆರೋನಿಕ ಕರ್ನೆಲಿಯೊ ಮೊದಲಾದವರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net