ಡಿಜಿಟಲ್ ಯುಗದಲ್ಲೂ ಅಂಚೆ ಇಲಾಖೆ ವಿಶ್ವಾಸದ ಸಂಸ್ಥೆ

 ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಅಂಚೆ ಇಲಾಖೆ ಮಾಹಿತಿ ಕಾರ್ಯಾಗಾರದಲ್ಲಿ ಗುರುಪ್ರಸಾದ್ ಮಾತನಾಡಿದರು. ಡಾ.ಬಿ.ಪಿ. ಸಂಪತ್ ಕುಮಾರ್, ಉಮಾ, ಶ್ರೀಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.
ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಅಂಚೆ ಇಲಾಖೆ ಮಾಹಿತಿ ಕಾರ್ಯಾಗಾರದಲ್ಲಿ ಗುರುಪ್ರಸಾದ್ ಮಾತನಾಡಿದರು. ಡಾ.ಬಿ.ಪಿ. ಸಂಪತ್ ಕುಮಾರ್, ಉಮಾ, ಶ್ರೀಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.
Published on
ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ
ತಂತ್ರಜ್ಞಾನ ಅಳವಡಿಸಿಕೊಂಡಿರುವ ಅಂಚೆ ಇಲಾಖೆ ವಿಶ್ವಾಸಾರ್ಹ ಸಂಸ್ಥೆಯಾಗಿ ಬೆಳೆದಿದ್ದು, ಶಿಕ್ಷಕರು ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ಈ ಸೇವೆಗಳ ಉಪಯುಕ್ತ ಮಾಹಿತಿ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಅಂಚೆ ಇಲಾಖೆ ಪುತ್ತೂರು ವಿಭಾಗದ ಕಾರ್ಯನಿರ್ವಾಹಕ ಅಧಿಕಾರಿ ಗುರುಪ್ರಸಾದ್ ಹೇಳಿದರು.
ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆ, ಅಂಚೆ ಇಲಾಖೆಯ ಜನಸಂಪರ್ಕ ಅಭಿಯಾನದ ಅಂಗವಾಗಿ ಶಿಕ್ಷಕರಿಗಾಗಿ ಆಯೋಜಿಸಲಾದ ಅಂಚೆ ಇಲಾಖೆಯ ಮಾಹಿತಿ ಕಾರ್ಯಾಗಾರದಲ್ಲಿ ಅಂಚೆ ಇಲಾಖೆಯ ವ್ಯಾಪಕ ಸೇವೆಗಳ ಕುರಿತು ವಿವರಿಸಿದರು.
ಅಂಚೆ ಇಲಾಖೆಯ ವಿವಿಧ ಸೇವೆಗಳು, ಜನಪರ ಯೋಜನೆಗಳು ಹಾಗೂ ಡಿಜಿಟಲ್ ಯುಗದಲ್ಲಿ ಇಲಾಖೆಯ ಬದಲಾಗುತ್ತಿರುವ ಕಾರ್ಯವೈಖರಿ ಕುರಿತು ಸಮಗ್ರ ಮಾಹಿತಿ ನೀಡುವ ಉದ್ದೇಶದಿಂದ ಕಾರ್ಯಾಗಾರ ಆಯೋಜಿಸಲಾಯಿತು.
ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಬಿ.ಪಿ.ಸಂಪತ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಅಂಚೆ ಕಚೇರಿ ಸಿಬ್ಬಂದಿ ಉಮಾ, ಎಕ್ಸಲೆಂಟ್ ಸಿಬಿಎಸ್ಸಿ ಶಾಲೆ ಪ್ರಾಂಶುಪಾಲ ಶ್ರೀಪ್ರಸಾದ್ ಉಪಸ್ಥಿತರಿದ್ದರು. ಪಾರ್ಶ್ವನಾಥ ಜೈನ್ ಸ್ವಾಗತಿಸಿದರು.

ಶಿಕ್ಷಣ ಸಂಸ್ಥೆಗಳು ಕೇವಲ ಪಠ್ಯಜ್ಞಾನ ನೀಡುವ ಕೇಂದ್ರಗಳಾಗಿರದೆ ಸಮಾಜದ ವಿವಿಧ ವ್ಯವಸ್ಥೆಗಳ ಕುರಿತು ಜಾಗೃತಿ ಮೂಡಿಸುವ ವೇದಿಕೆಗಳಾಗಬೇಕು. ಅಂಚೆ ಇಲಾಖೆಯಂತಹ ಜನಸೇವಾ ಸಂಸ್ಥೆಗಳ ಕಾರ್ಯವೈಖರಿಯನ್ನು ಶಿಕ್ಷಕರು ಅರಿತುಕೊಳ್ಳುವುದು ಅಗತ್ಯವಾಗಿದ್ದು, ಇಂತಹ ಕಾರ್ಯಾಗಾರಗಳು ಶಿಕ್ಷಕರ ಜ್ಞಾನ ವಿಸ್ತರಣೆಯೊಂದಿಗೆ ವಿದ್ಯಾರ್ಥಿಗಳಲ್ಲಿ ಸಾರ್ವಜನಿಕ ಸೇವೆಗಳ ಕುರಿತು ಅರಿವು ಮೂಡಿಸಲು ಸಹಕಾರಿಯಾಗುತ್ತವೆ.

— ಡಾ.ಬಿ.ಪಿ.ಸಂಪತ್ ಕುಮಾರ್ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಆಡಳಿತ ನಿರ್ದೇಶಕ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net