ಅಹವಾಲು ಆಲಿಸುವುದು ಜನಸಂಪರ್ಕ ಸಭೆ ಉದ್ದೇಶ

 ಕುಂಭಾಶಿ ಗ್ರಾಪಂ ವ್ಯಾಪ್ತಿಯ ಶ್ರೀ ವಿನಾಯಕ ಸಭಾ ಭವನದಲ್ಲಿ ಸುಕನ್ಯಾ ಸಮೃದ್ಧಿ ಯೋಜನೆ ಲಾನುಭವಿಗಳಿಗೆ ಠೇವಣಿ ಪುಸ್ತಕವನ್ನು ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹಸ್ತಾಂತರಿಸಿದರು.
ಕುಂಭಾಶಿ ಗ್ರಾಪಂ ವ್ಯಾಪ್ತಿಯ ಶ್ರೀ ವಿನಾಯಕ ಸಭಾ ಭವನದಲ್ಲಿ ಸುಕನ್ಯಾ ಸಮೃದ್ಧಿ ಯೋಜನೆ ಲಾನುಭವಿಗಳಿಗೆ ಠೇವಣಿ ಪುಸ್ತಕವನ್ನು ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹಸ್ತಾಂತರಿಸಿದರು.
Published on
ಕುಂದಾಪುರ: ಗ್ರಾಮಮಟ್ಟದ ಸಮಸ್ಯೆಗಳ ಪರಿಹಾರದ ಬಗ್ಗೆ ಪ್ರತಿ ಗ್ರಾಮ ಪಂಚಾಯಿತಿಗೂ ಭೇಟಿ ನೀಡಿ ಜನರ ಅಹವಾಲು ನೇರವಾಗಿ ಆಲಿಸುವುದೇ ಈ ಸಭೆಯ ಉದ್ದೇಶ. ರಸ್ತೆ, ಕುಡಿಯುವ ನೀರು, ಬೀದಿ ದೀಪ, ಚರಂಡಿ ಸೇರಿದಂತೆ ವಿವಿಧ ಸಮಸ್ಯೆಗಳ ಅಹವಾಲು ಸ್ವೀಕರಿಸಿ ಸ್ಥಳದಲ್ಲಿಯೇ ಅಧಿಕಾರಿಗಳೊಂದಿಗೆ ಚರ್ಚಿಸಿ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ವೇಗವಾಗಿ ಕಾರ್ಯನಿರ್ವಹಿಸಬೇಕು ಎಂದು ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು.
ಕುಂಭಾಶಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀ ವಿನಾಯಕ ಸಭಾ ಭವನದಲ್ಲಿ ಜನಸಂಪರ್ಕ ಸಭೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಶಿಶು ಅಭಿವೃದ್ಧಿ ಇಲಾಖೆಯಿಂದ ಸುಕನ್ಯಾ ಸಮೃದ್ಧಿ ಯೋಜನೆ ಲಾನುಭವಿಗಳಿಗೆ ಠೇವಣಿ ಪುಸ್ತಕ ಹಸ್ತಾಂತರಿಸಲಾಯಿತು.
ಕುಂದಾಪುರ ತಹಸೀಲ್ದಾರ್ ಪ್ರದೀಪ್ ಕುರುಡೇಕರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಿ.ಮಹೇಶ್, ಕುಂದಾಪುರ ತಹಸೀಲ್ದಾರ್ ಗ್ರೇಡ್-2 ವಸಂತ್ ಕುವಾರ್, ಕುಂಭಾಶಿ ಗ್ರಾಮ ಆಡಳಿತ ಅಧಿಕಾರಿ ದೀಪ್ತಿ, ಕುಂಭಾಶಿ ಪಿಡಿಒ ಗಣೇಶ್, ಕುಂದಾಪುರ ಗ್ಯಾರಂಟಿ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಮತ್ತಿತರರು ಉಪಸಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net