ಕಾಣಿಯೂರು ಗ್ರಾ.ಪಂ. ಎದುರು ದೋಳ್ಪಾಡಿ ಗ್ರಾಮಸ್ಥರು ಕಸ್ತೂರಿರಂಗನ್ ವರದಿ ವಿರೋಧಿಸಿ ಪ್ರತಿಭಟನೆ ನಡೆಸಿದರು. ಕಿಶೋರ್ ಶಿರಾಡಿ, ಗಣೇಶ್ ಉದನಡ್ಕ, ಸೀತಾರಾಮ ಗೌಡ ಮರಕ್ಕಡ ಮೊದಲಾದವರು ಉಪಸ್ಥಿತರಿದ್ದರು.
Published on:
Copied
Follow Us
ಕಡಬ: ಪಶ್ಚಿಮಘಟ್ಟಗಳ ಸಂರಕ್ಷಣೆ ಹೆಸರಿನಲ್ಲಿ ಜಾರಿಗೆ ತರಲು ಉದ್ದೇಶಿಸಿರುವ ಕಸ್ತೂರಿರಂಗನ್ ವರದಿಯ ವಿರುದ್ಧ ನಿರಂತರ ಧ್ವನಿ ಎತ್ತುತ್ತಾ ಬಂದಿದ್ದೇವೆ. ನೂರಾರು ವರ್ಷಗಳಿಂದ ಬದುಕು ಕಟ್ಟಿಕೊಂಡಿರುವ ಜನರನ್ನು ಒಕ್ಕಲೆಬ್ಬಿಸುವ ಹುನ್ನಾರದ ಜತೆಗೆ ಟೂರಿಸಂ ತಾಣವಾಗಿ ರೂಪಿಸುವ ತಂತ್ರಗಾರಿಕೆಯೂ ಈ ಯೋಜನೆಯಲ್ಲಿದೆ. ವರದಿಯಿಂದ ಕೃಷಿ ಚಟುವಟಿಕೆಗಳು, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಳ್ಳಿ ಜನರ ದೈನಂದಿನ ಬದುಕಿಗೆ ಮಾರಕ ಕಾನೂನುಗಳು ಜಾರಿಯಾಗಲಿವೆ ಎಂದು ಮಲೆನಾಡು ಹಿತ ರಕ್ಷಣಾ ವೇದಿಕೆಯ ಜಿಲ್ಲಾ ಸಂಚಾಲಕ ಕಿಶೋರ್ ಶಿರಾಡಿ ಹೇಳಿದರು.
ಕಸ್ತೂರಿರಂಗನ್ ವರದಿಯಿಂದ ದೋಳ್ಪಾಡಿ ಗ್ರಾಮವನ್ನು ತಕ್ಷಣ ಕೈಬಿಡಬೇಕು, ಪಶ್ಚಿಮಘಟ್ಟವನ್ನು ಗುರುತಿಸಿ ಗಡಿಗುರುತು ಮಾಡಬೇಕು ಎಂದು ಆಗ್ರಹಿಸಿ ದೋಳ್ಪಾಡಿ ಗ್ರಾಮಸ್ಥರು ಕಾಣಿಯೂರು ಗ್ರಾಮ ಪಂಚಾಯಿತಿ ಎದುರು ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದರು.
ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ದೋಳ್ಪಾಡಿ ಗ್ರಾಮ ಸಮಿತಿ ಸಂಚಾಲಕ ಸೀತಾರಾಮ ಗೌಡ ಮರಕ್ಕಡ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಿಲನ್ ಬಾಳಿಕಳ, ಗ್ರಾಮಸ್ಥರು ಭಾಗವಹಿಸಿದ್ದರು,
ಲೋಕಯ್ಯ ಪರವ ದೋಳ್ಪಾಡಿ ಸ್ವಾಗತಿಸಿದರು. ಮೋಹನ್‌ದಾಸ್ ರೈ ಬಳ್ಕಾಡಿ ವಂದಿಸಿದರು. ವಿನುತಾ ರೈ ದೋಳ್ಪಾಡಿ ಕಾರ್ಯಕ್ರಮ ನಿರೂಪಿಸಿದರು. ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಹರೀಶ್ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಘು ಎನ್.ಬಿ. ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.