

ಬೆಳ್ತಂಗಡಿ: ತಳಮಟ್ಟದ ಕಾರ್ಯಕರ್ತರ ಅಭಿಪ್ರಾಯ, ಸಲಹೆ ಹಾಗೂ ಅನುಭವಗಳನ್ನು ಆಧರಿಸಿ ಪಕ್ಷ ಸಂಟನೆಯ ಮುಂದಿನ ರೂಪುರೇಷೆಗಳನ್ನು ರೂಪಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ಕಾಂಗ್ರೆಸ್ ಕೇವಲ ಚುನಾವಣೆ ಸಂದರ್ಭದಲ್ಲಿ ಸಕ್ರಿಯವಾಗಿರದೆ ಜನರ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುವ ಜನಪರ ಪಕ್ಷವಾಗಿದೆ. ಗ್ರಾಮ, ಬೂತ್ ಹಾಗೂ ಬ್ಲಾಕ್‌ಮಟ್ಟದಿಂದ ಪಕ್ಷ ಸಂಟನೆ ಮಾಡಬೇಕು. ಈ ನಿಟ್ಟಿನಲ್ಲಿ ತಳಮಟ್ಟದ ಕಾರ್ಯಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದರು.