

ಹೆಬ್ರಿ: ಶೈಕ್ಷಣಿಕ ಉನ್ನತಿಯೊಂದಿಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಕಾಲೇಜು ವಿದ್ಯಾರ್ಥಿ ಸಂಘಗಳು ಭವಿಷ್ಯದ ಸಮಾಜವನ್ನು ಮುನ್ನಡೆಸುವ ಹೊಣೆಗಾರಿಕೆ ರೂಪಿಸುವ ಮಹತ್ವದ ವೇದಿಕೆಗಳಾಗಿವೆ ಎಂದು ನಿವೃತ್ತ ಪ್ರಾಂಶುಪಾಲ ಶ್ರೀವರ್ಮ ಅಜ್ರಿ ಎಂ. ಹೇಳಿದರು.
ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಉದ್ಘಾಟಿಸಿ ಮಾತನಾಡಿದರು.
ಪ್ರಾಂಶುಪಾಲ ಡಾ.ಜಯಪ್ರಕಾಶ್ ಶೆಟ್ಟಿ ಎಚ್. ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಸಂಚಾಲಕಿ ಡಾ.ಸೌಮ್ಯಲತಾ ಪಿ., ಐಕ್ಯೂಎಸಿ ಸಂಚಾಲಕ ಡಾ.ಲಿತಿನ್ ಬಿ.ಎಂ., ವಿದ್ಯಾರ್ಥಿ ವೇದಿಕೆ ಅಧ್ಯಕ್ಷೆ ದೀಕ್ಷಾ, ಉಪಾಧ್ಯಕ್ಷೆ ದೀಕ್ಷಾ ಉಪಸ್ಥಿತರಿದ್ದರು. ಶ್ರಾವ್ಯ ಸ್ವಾಗತಿಸಿದರು. ವರ್ಷ ವಂದಿಸಿದರು. ಶಶಾಂಕ್ ಪೈ ನಿರೂಪಿಸಿದರು.