ಜು.15ರಂದು ಉಪ್ಪಿನಂಗಡಿಗೆ ಆಗಮಿಸಿದ್ದ ಆರೋಪಿ ಅಲ್ಲಿ ಕೃಷಿ ಸಲಕರಣೆಗಳ ಮಾರಾಟ ಮಳಿಗೆಗೆ ಭೇಟಿ ನೀಡಿ ಕೃಷಿಕರು ಬಳಸುವ ಉದ್ದನೆಯ ಕತ್ತಿಯನ್ನು ಪರಿಶೀಲಿಸಿ ಅದರ ಬೆಲೆ ಕೇಳಿ ತೆರಳಿದ್ದ. ಬಳಿಕ ಹೊರಗೆ ಹೋಗಿದ್ದ ಆತ ವಾಪಸ್ ಅದೇ ಅಂಗಡಿಗೆ ಬಂದು ಕತ್ತಿಯನ್ನು ಖರೀದಿಸಿದ್ದ ದೃಶ್ಯಾವಳಿಗಳು ಅಲ್ಲಿನ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿವೆ. ಈ ಬಗ್ಗೆ ತನಿಖಾಧಿಕಾರಿಗಳು ಆರೋಪಿ ಚೇತನ್ ಜತೆ ಸ್ಥಳಕ್ಕೆ ಕರೆ ತಂದು ಮಹಜರು ಪ್ರಕ್ರಿಯೆ ನಡೆಸಿದರು.