ಶಿಸ್ತಿನೊಂದಿಗೆ ಮನಸ್ಸುಗಳನ್ನು ಕಟ್ಟುವ ಕಾರ್ಯ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭದಲ್ಲಿ ಐದು ಮಂದಿ ವಿದ್ಯಾರ್ಥಿಗಳಿಗೆ ಪಿ.ಬಿ ಆಚಾರ್ಯ ಗೋಲ್ಡ್ ಹಾಗೂ ಸೀತಾರಾಮ್ ಜಿಂದಾಲ್ ಗೋಲ್ಡ್ ಅವಾರ್ಡ್ ನೀಡಿ ಗೌರವಿಸಲಾಯಿತು. ಪ್ರಮುಖರಾದ ಡಾ.ಕೆ.ಚಿನ್ನಪ್ಪ ಗೌಡ, ಡಾ.ಎಂ.ಮೋಹನ ಆಳ್ವ, ಡಾ.ಕುರಿಯನ್ ಮೊದಲಾದವರಿದ್ದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭದಲ್ಲಿ ಐದು ಮಂದಿ ವಿದ್ಯಾರ್ಥಿಗಳಿಗೆ ಪಿ.ಬಿ ಆಚಾರ್ಯ ಗೋಲ್ಡ್ ಹಾಗೂ ಸೀತಾರಾಮ್ ಜಿಂದಾಲ್ ಗೋಲ್ಡ್ ಅವಾರ್ಡ್ ನೀಡಿ ಗೌರವಿಸಲಾಯಿತು. ಪ್ರಮುಖರಾದ ಡಾ.ಕೆ.ಚಿನ್ನಪ್ಪ ಗೌಡ, ಡಾ.ಎಂ.ಮೋಹನ ಆಳ್ವ, ಡಾ.ಕುರಿಯನ್ ಮೊದಲಾದವರಿದ್ದರು.
Published on
ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ
ಆಳ್ವಾಸ್ ಶಿಕ್ಷಣ ಸಂಸ್ಥೆ ಕೇವಲ ಪದವಿ ಅಥವಾ ಅಂಕ ನೀಡುವ ಕೇಂದ್ರವಲ್ಲ. ಬದಲಿಗೆ ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಉತ್ತಮ ಚಾರಿತ್ರೃ ಮೂಡಿಸುವ ಮೂಲಕ ಮನಸ್ಸುಗಳನ್ನು ಕಟ್ಟುವ ಕೆಲಸ ಮಾಡುತ್ತಿದೆ. ಎಲ್ಲ ಕಾಲೇಜುಗಳಲ್ಲೂ ಕೋರ್ಸ್‌ಗಳು, ಶಿಕ್ಷಕರು ಮತ್ತು ಪರೀಕ್ಷೆಗಳು ಇರುತ್ತವೆ. ಆದರೆ ಆಳ್ವಾಸ್ ಕಾಲೇಜಿನ ವೈಶಿಷ್ಟೃವೇ ಬೇರೆ. ಈ ಸಂಸ್ಥೆಯಿಂದ ಹೊರಹೋಗುವಾಗ ವಿದ್ಯಾರ್ಥಿಗಳು ಕೇವಲ ಪ್ರಮಾಣಪತ್ರ ಮಾತ್ರವಲ್ಲ, ಇಲ್ಲಿನ ಭವ್ಯ ಪರಂಪರೆ ಮತ್ತು ಮೌಲ್ಯಗಳನ್ನು ಜತೆಯಲ್ಲಿ ಕೊಂಡೊಯ್ಯುತ್ತಿದ್ದಾರೆ ಎಂದು ಕರ್ನಾಟಕ ಜಾನಪದ ವಿ.ವಿ. ವಿಶ್ರಾಂತ ಕುಲಪತಿ ಡಾ.ಕೆ.ಚಿನ್ನಪ್ಪ ಗೌಡ ಹೇಳಿದರು.

ವಿದ್ಯಾಗಿರಿ ಆಳ್ವಾಸ್ ನುಡಿಸಿರಿ ಸಭಾಂಗಣದಲ್ಲಿ ಮಂಗಳೂರು ವಿಶ್ವವಿದ್ಯಾಲಯ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಒಳಪಟ್ಟ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಒಟ್ಟು 2,627 ವಿದ್ಯಾರ್ಥಿಗಳಿಗೆ ಶನಿವಾರ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಡಾ.ಕೇಕೆಸನ, ಡಾ.ಅಂಜನಾ ಎಂ., ಡಾ.ನರೇಶ್ ಅವರಿಗೆ ಪಿ.ಬಿ ಆಚಾರ್ಯ ಗೋಲ್ಡ್ ಅವಾರ್ಡ್ ಹಾಗೂ ಡಾ.ನೌರೆನ್ ಸಿಂಗ್, ಡಾ.ಗೌತಮ್ ಬಿ. ಅವರಿಗೆ ಸೀತಾರಾಮ್ ಜಿಂದಾಲ್ ಗೋಲ್ಡ್ ಅವಾರ್ಡ್ ನೀಡಿ ಗೌರವಿಸಲಾಯಿತು.

ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿವಿಧ ಕಾಲೇಜುಗಳ ಪ್ರಾಂಶುಪಾಲರಾದ ಡಾ.ಕುರಿಯನ್, ಡಾ.ವನಿತಾ ಶೆಟ್ಟಿ, ಡಾ.ಪೀಟರ್ ಫೆರ್ನಾಂಡಿಸ್, ಡಾ.ಶಂಕರ್ ಮೂರ್ತಿ, ಮಧು ಜಿ.ಆರ್.ಶಂಕರ್ ಶೆಟ್ಟಿ, ಡಾ.ಕ್ಷಮಾ ಸುಶೀಲ್ ಶೆಟ್ಟಿ, ಡಾ.ಸುಶೀಲ್ ಶೆಟ್ಟಿ, ಡಾ.ಪ್ರವೀಣ್ ರಾಜ್ ಆಳ್ವ ಉಪಸ್ಥಿತರಿದ್ದರು. ರಾಜೇಶ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

ಪದವಿ ಪ್ರಮಾಣಪತ್ರ ಎಂಬುದು ಕೇವಲ ಒಂದು ಕಾಗದದ ತುಂಡು ಮಾತ್ರ. ಅದರಲ್ಲಿ ಕೇವಲ ವಿದ್ಯಾರ್ಥಿಯ ಹೆಸರು, ಪದವಿ ಮತ್ತು ಅಂಕಗಳು ಇರುತ್ತವೆಯೇ ಹೊರತು ಅದೇ ಅಂತಿಮವಲ್ಲ. ನಾಳೆ ಉದ್ಯೋಗ ಮಾರುಕಟ್ಟೆಯಲ್ಲಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವುದು ಕೇವಲ ಪ್ರಮಾಣಪತ್ರವನ್ನು ನೋಡಿಯಲ್ಲ, ಬದಲಿಗೆ ಅವರಲ್ಲಿರುವ ಯೋಗ್ಯತೆ, ಅರ್ಹತೆ ಮತ್ತು ಪ್ರತಿಭೆಯನ್ನು ಆಧರಿಸಿ ಎಂಬುದನ್ನು ಮರೆಯಬಾರದು.

— ಡಾ.ಕೆ.ಚಿನ್ನಪ್ಪ ಗೌಡ ಕರ್ನಾಟಕ ಜಾನಪದ ವಿವಿ ವಿಶ್ರಾಂತ ಕುಲಪತಿ


ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net