ವೇದಗಳು ಭಾರತೀಯ ಸಂಸ್ಕೃತಿಯ ಜೀವನಾಡಿ

 ವೇದವಿದ್ವಾಂಸ ಪಂಜ ಭಾಸ್ಕರ ಭಟ್ ಅವರಿಗೆ ವೇದವಿಭೂಷಣ ಪ್ರಶಸ್ತಿ ನೀಡಲಾಯಿತು. ಶ್ರೀ ಚಂದ್ರಶೇಖರ ಸ್ವಾಮೀಜಿ, ಸೇವಾಶ್ರಮದ ನಿರ್ದೇಶಕಿ ರಜನಿ ಚಂದ್ರಶೇಖರ್, ಉದ್ಯಮಿ ರಾಹುಲ್ ಚಂದ್ರಶೇಖರ್ ಮೊದಲಾದವರಿದ್ದರು.
ವೇದವಿದ್ವಾಂಸ ಪಂಜ ಭಾಸ್ಕರ ಭಟ್ ಅವರಿಗೆ ವೇದವಿಭೂಷಣ ಪ್ರಶಸ್ತಿ ನೀಡಲಾಯಿತು. ಶ್ರೀ ಚಂದ್ರಶೇಖರ ಸ್ವಾಮೀಜಿ, ಸೇವಾಶ್ರಮದ ನಿರ್ದೇಶಕಿ ರಜನಿ ಚಂದ್ರಶೇಖರ್, ಉದ್ಯಮಿ ರಾಹುಲ್ ಚಂದ್ರಶೇಖರ್ ಮೊದಲಾದವರಿದ್ದರು.
Published on

ವಿಜಯವಾಣಿ ಸುದ್ದಿಜಾಲ ಮೂಲ್ಕಿ

ವೇದಗಳು ಭಾರತೀಯ ಸಂಸ್ಕೃತಿಯ ಜೀವನಾಡಿ. ವೇದ ಪರಂಪರೆಯನ್ನು ಜೀವಂತವಾಗಿರಿಸಿ ಮುಂದಿನ ಪೀಳಿಗೆಗೆ ತಲುಪಿಸುವ ವೇದವಿದ್ವಾಂಸರ ಸೇವೆ ಸಮಾಜಕ್ಕೆ ಅಮೂಲ್ಯ ಕೊಡುಗೆ ಎಂದು ಶ್ರೀ ಚಂದ್ರಶೇಖರ ಸ್ವಾಮೀಜಿ ಆಶೀರ್ವಚನ ನೀಡಿದರು.
ವೇದವಿದ್ವಾಂಸ ಪಂಜ ಭಾಸ್ಕರ ಭಟ್ ಅವರಿಗೆ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ಪ್ರತಿಷ್ಠಿತ ವೇದವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸೇವಾಶ್ರಮದ ನಿರ್ದೇಶಕಿ ರಜನಿ ಚಂದ್ರಶೇಖರ್, ಉದ್ಯಮಿ ರಾಹುಲ್ ಚಂದ್ರಶೇಖರ್, ನಿರ್ದೇಶಕ ರಾಘವ ಸೂರ್ಯ, ಕಾನೂನು ಸಲಹೆಗಾರ ರೋಶಿನಿ ರಾಘವ್ ಸೂರ್ಯ, ಆಶ್ರಮದ ಸಂಚಾಲಕ ಪುನೀತಕೃಷ್ಣ, ವೇದ ವಿದ್ವಾಂಸರು, ವಿವಿಧ ಕ್ಷೇತ್ರಗಳ ಗಣ್ಯರು, ಭಕ್ತರು, ಧರ್ಮಾಭಿಮಾನಿಗಳು ಉಪಸ್ಥಿತರಿದ್ದರು.

ಈ ಗೌರವ ನನ್ನ ವೈಯಕ್ತಿಕ ಸಾಧನೆಯ ಲವಲ್ಲ. ನನ್ನ ಗುರು ಪರಂಪರೆ, ವೇದಮಾತೆ, ಹಿರಿಯ ವಿದ್ವಾಂಸರು, ನನ್ನನ್ನು ರೂಪಿಸಿದ ಎಲ್ಲ ಗುರು ಜನರ ಆಶೀರ್ವಾದದ ಪ್ರತಿಲವಾಗಿದೆ. ಈ ಪುರಸ್ಕಾರ ನನ್ನ ಹೊಣೆಗಾರಿಕೆಯನ್ನು ಇನ್ನಷ್ಟು ಹೆಚ್ಚಿಸಿದೆ. ಮುಂದಿನ ದಿನಗಳಲ್ಲಿ ವೇದ ಸಂರಕ್ಷಣೆ, ಧರ್ಮ ಪ್ರಚಾರ, ಪೌರೋಹಿತ್ಯ ಸೇವೆಗೆ ಸಂಪೂರ್ಣ ಸಮರ್ಪಣಾಭಾವದಿಂದ ಕಾರ್ಯ ನಿರ್ವಹಿಸುತ್ತೇನೆ.

— ಪಂಜ ಭಾಸ್ಕರ ಭಟ್ ವೇದವಿದ್ವಾಂಸ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net