ಮಾಧ್ಯಮದಿಂದ ಎಲ್ಲ ರಂಗವನ್ನು ಎಚ್ಚರಿಸುವ ಕೆಲಸ

 ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಗುರುವಾರ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಎಂ.ಎ.ಗಫೂರ್ ಉದ್ಘಾಟಿಸಿದರು. ಪ್ರಮುಖರಾದ ಬಿಪಿನ್ ಚಂದ್ರಪಾಲ್ ನಕ್ರೆ, ಗಣಪತಿ ಕೆ.ಎಸ್., ಮೊಹಮ್ಮದ್ ಶರೀಫ್ ಮೊದಲಾದವರಿದ್ದರು.
ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಗುರುವಾರ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಎಂ.ಎ.ಗಫೂರ್ ಉದ್ಘಾಟಿಸಿದರು. ಪ್ರಮುಖರಾದ ಬಿಪಿನ್ ಚಂದ್ರಪಾಲ್ ನಕ್ರೆ, ಗಣಪತಿ ಕೆ.ಎಸ್., ಮೊಹಮ್ಮದ್ ಶರೀಫ್ ಮೊದಲಾದವರಿದ್ದರು.
Published on
ಕಾರ್ಕಳ: ಎಲ್ಲ ರಂಗವನ್ನು ಎಚ್ಚರಿಸುವ ಕೆಲಸವನ್ನು ಮಾಧ್ಯಮ ರಂಗ ಮಾಡುತ್ತಿದೆ. ಪತ್ರಿಕೆ ಓದುವುದರಿಂದ ಸಾಮಾನ್ಯ ಜ್ಞಾನ ವೃದ್ಧಿಸುತ್ತದೆ. ವೈಜ್ಞಾನಿಕ ಮನೋಭಾವ ಹಾಗೂ ವೈಚಾರಿಕ ಮನೋಭಾವಕ್ಕಾಗಿ ಪತ್ರಿಕೆ ಓದಬೇಕು ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಎ.ಗಫೂರ್ ಹೇಳಿದರು.
ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂ, ಕಾರ್ಕಳ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಸಹಯೋಗದಲ್ಲಿ ಕ್ರಿಯೇಟಿವ್ ಕಾಲೇಜಿನಲ್ಲಿ ಗುರುವಾರ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಹಿರಿಯ ಪತ್ರಕರ್ತ ಬಿಪಿನ್ ಚಂದ್ರಪಾಲ್ ನಕ್ರೆ ಹಾಗೂ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಸಹ ಸಂಸ್ಥಾಪಕ ಗಣಪತಿ ಕೆ.ಎಸ್. ಮಾತನಾಡಿದರು. ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂ ಅಧ್ಯಕ್ಷ ಮೊಹಮ್ಮದ್ ಶರೀಫ್ ಅಧ್ಯಕ್ಷತೆ ವಹಿಸಿದ್ದರು.
ಪ್ರತಿಭಾವಂತ ವಿದ್ಯಾರ್ಥಿಗಳಾದ ಪ್ರಜ್ಞಾ ರಾವ್ ಎಂ., ಶಿಥಿಲ್ ಎಸ್.ಶೆಟ್ಟಿ, ಸಮೀಕ್ಷಾ, ಐಪುನ್ ಮರಿಯಂ ಫಾತಿಮ, ತನಿಷ್ ಕುವಾರ್ ಅವರಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂದ ರಾಜ್ಯ ಸಮಿತಿ ಸದಸ್ಯ ಆಸ್ಟ್ರೋ ಮೋಹನ್, ತಾಲೂಕು ಕಾರ್ಯದರ್ಶಿ ಹರೀಶ್ ಸಚ್ಚೇರಿಪೇಟೆ, ಕೋಶಾಧಿಕಾರಿ ಸತೀಶ್ ಶೆಟ್ಟಿ ವಾಮದಪದವು ಉಪಸ್ಥಿತರಿದ್ದರು.
ವಾಸುದೇವ ಭಟ್ ಪ್ರಾಸ್ತಾವಿಕ ಮಾತನಾಡಿದರು. ಉದಯ ಕುವಾರ್ ಮುಂಡ್ಕೂರು ಸ್ವಾಗತಿಸಿದರು. ಹರೀಶ್ ಆಚಾರ್ಯ ವಿದ್ಯಾರ್ಥಿಗಳ ಪಟ್ಟಿ ಮಾಚಿಸಿದರು. ಚೈತ್ರಾ ಕಬ್ಬಿನಾಲೆ ನಿರೂಪಿಸಿದರು. ಅವಿನ್ ಶೆಟ್ಟಿ ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net