ಭಾಷೆ ಉಳಿಸುವ ಕೆಲಸ ನಮ್ಮಿಂದಲೇ ಆಗಬೇಕು

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಉದ್ಘಾಟಿಸಿದರು. ಸಮ್ಮೇಳನದ ನಿಕಟಪೂರ್ವ ಅಧ್ಯಕ್ಷ ಡಾ.ಪ್ರಭಾಕರ ಶಿಶಿಲ, ಸರ್ವಾಧ್ಯಕ್ಷ ಚಿದಂಬರ ಬೈಕಂಪಾಡಿ ಮೊದಲಾದವರಿದ್ದರು.
ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಉದ್ಘಾಟಿಸಿದರು. ಸಮ್ಮೇಳನದ ನಿಕಟಪೂರ್ವ ಅಧ್ಯಕ್ಷ ಡಾ.ಪ್ರಭಾಕರ ಶಿಶಿಲ, ಸರ್ವಾಧ್ಯಕ್ಷ ಚಿದಂಬರ ಬೈಕಂಪಾಡಿ ಮೊದಲಾದವರಿದ್ದರು.
Published on
ವಿಜಯವಾಣಿ ಸುದ್ದಿಜಾಲ ಬಂಟ್ವಾಳ
ಶಾಲೆಗಳಲ್ಲಿ ಕನ್ನಡ ಕಲಿಸುವ ಶಿಕ್ಷಕರ ಕೊರತೆಯಿದ್ದು, ಸರ್ಕಾರದ ಧೋರಣೆಯಿಂದ ಕನ್ನಡ ಉಳಿಸಿ, ಬೆಳೆಸಲು ಅಸಾಧ್ಯವಾಗಿದೆ. ಮಕ್ಕಳು ಯಾವ ಮಾಧ್ಯಮದಲ್ಲಿ ಕಲಿತರೂ ಅವರಿಗೆ ಕನ್ನಡ-ತುಳು ಕಲಿಸುವ ಜವಾಬ್ದಾರಿ ನಮ್ಮ ಮೇಲಿದೆ. ನಾವೇ ಕನ್ನಡ ಕಲಿಸುವ ಮೂಲಕ ಭಾಷೆ ಉಳಿಸಿ, ಬೆಳೆಸಬೇಕಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಹೇಳಿದರು.
ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ಶುಕ್ರವಾರ ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
ಸರ್ವಾಧ್ಯಕ್ಷ ಚಿದಂಬರ ಬೈಕಂಪಾಡಿ ಅವರಿಗೆ ಸಮ್ಮೇಳನದ ನಿಕಟಪೂರ್ವ ಅಧ್ಯಕ್ಷ ಡಾ.ಪ್ರಭಾಕರ ಶಿಶಿಲ ಕನ್ನಡದ ಧ್ವಜ ಹಸ್ತಾಂತರಿಸಿದರು. ಸಂಸ್ಕಾರ ಭಾರತಿ ಉಪಾಧ್ಯಕ್ಷ ಅನಿಲ್ ಪಂಡಿತ್ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು. ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕಸಾಪ ಮಾಜಿ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಮಾತನಾಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೆಶಕ ದಿನೇಶ್ ಡಿ., ಬಂಟ್ವಾಳ ತಾಲೂಕು ಕಸಾಪ ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಡಿ.ಎಸ್.ಗಟ್ಟಿ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಕಿನ್ನಿಗೋಳಿ ಯುಗಪುರುಷದ ಭುವನಾಭಿರಾಮ ಉಡುಪ, ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ., ಜ್ಯೋತಿಷಿ ಚೈತನ್ಯ ಕಲ್ಯಾಣತ್ತಾಯ, ವಿವಿಧ ತಾಲೂಕು ಕಸಾಪ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು, ಡಿ.ಯದುಪತಿ ಗೌಡ, ಮಂಜುನಾಥ ಎಸ್.ರೇವಣ್ಕರ್, ಕೆ.ಸೇಸಪ್ಪ ರೈ, ಪುತ್ತೂರು ಉಮೇಶ್ ನಾಯ್ಕ, ಧನಂಜಯ ಕುಂಬ್ಳೆ, ಮಿಥುನ್ ಉಡುಪ ಮೂಲ್ಕಿ, ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ರಘುನಾಥ ಸೋಮಯಾಜಿ ಎರಕಳ, ಕಾರ್ಯಾಧ್ಯಕ್ಷ ಪಿಯೂಸ್ ಎಲ್.ರೋಡ್ರಿಗಸ್, ಪ್ರಧಾನ ಕಾರ್ಯದರ್ಶಿ ಅಬೂಬಕ್ಕರ್ ಅಮ್ಮುಂಜೆ, ಕಾರ್ಯದರ್ಶಿಗಳಾದ ದೇವಪ್ಪ ಕುಲಾಲ್, ರಾಮದಾಸ್ ಬಂಟ್ವಾಳ, ಕೋಶಾಧಿಕಾರಿ ಸುಭಾಶ್ಚಂದ್ರ ಜೈನ್, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ರಾಜೇಶ್ವರಿ ಎಂ., ವಕೀಲ ವೈ.ಉಮೇಶ್ ಕುಮಾರ್, ಪೂವಪ್ಪ ನೇರಳಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.
ಬಂಟ್ವಾಳ ತಹಸೀಲ್ದಾರ್ ಜಿ.ಮಂಜುನಾಥ್ ರಾಷ್ಟ್ರ ಧ್ವಜಾರೋಹಣ, ಬಂಟ್ವಾಳ ತಾಲೂಕು ಕಸಾಪ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಸಮ್ಮೇಳನ ಧ್ವಜಾರೋಹಣಗೈದರು. ಜಿಲ್ಲಾಧ್ಯಕ್ಷ ಡಾ ಎಂ.ಪಿ.ಶ್ರೀನಾಥ್ ಪರಿಷತ್ತಿನ ಧ್ವಜಾರೋಹಣ ನೆರವೇರಿಸಿದರು. ಗೌರವ ಕಾರ್ಯದರ್ಶಿ ಎಚ್.ವಿನಯ ಆಚಾರ್ಯ ವಂದಿಸಿದರು. ಪತ್ರಕರ್ತ ಸಂದೀಪ್ ಸಾಲ್ಯಾನ್ ಸಮ್ಮೇಳನಾಧ್ಯಕ್ಷರನ್ನು ಪರಿಚಯಿಸಿದರು. ಡಾ.ಯೋಗೀಶ್ ಕೈರೋಡಿ ನಿರೂಪಿಸಿದರು.

ಜಾತಿ, ಭಾಷೆ, ಧರ್ಮ ಮೀರಿದ ಲೋಕ ಸೃಷ್ಟಿ

ಸಾಹಿತ್ಯ ನಿಂತ ನೀರಾಗಬಾರದು, ಚಲನೆಶೀಲತೆ ಮೈಗೂಡಿಸಿಕೊಂಡು ಬೆಳೆಯಬೇಕು. ಸಾಹಿತ್ಯ ಜಾತಿ, ಮತ, ಧರ್ಮ ಮೀರಿದ್ದು, ಸಾಹಿತ್ಯ ಭಾಷೆಗಷ್ಟೇ ಸೀಮಿತವಾಗಬಾರದು. ಅದು ಬದುಕನ್ನು ರೂಪಿಸುವ, ಚಲನಶೀಲತೆ ಮೈಗೂಡಿಸಿಕೊಂಡು ಸಮಾಜ ಕಟ್ಟುವ ಕೆಲಸ ಮಾಡಬೇಕು. ಸಾಹಿತ್ಯದಿಂದ ಜಾತಿ, ಭಾಷೆ, ಧರ್ಮ ಮೀರಿದ ಹೊಸ ಲೋಕ ಸೃಷ್ಟಿಯಾಗಬೇಕು. ನಮ್ಮ ಮಾತೃಭಾಷೆ ತುಳು. ತುಳು ಭಾಷೆಯ ಮೇಲೆ ಕನ್ನಡ ಹೇರಿಕೆ ಮಾಡಲಾಗುತ್ತಿದೆ ಎನ್ನುವ ವಾದ ಒಪ್ಪಲು ಸಾಧ್ಯವಿಲ್ಲ. ಸ್ವಾತಂತ್ರೃ ಹೋರಾಟಗಾರ ಅಮ್ಮೆಂಬಳ ಬಾಳಪ್ಪ ಅವರ ಹೆಸರನ್ನು ಚಿರಸ್ಥಾಯಿಯಾಗಿಸುವ ಕೆಲಸ ಆಗಬೇಕು. ಬಂಟ್ವಾಳದಲ್ಲಿ ಸರ್ವಜ್ಞ ಪೀಠ ಸ್ಥಾಪಿಸುವ ಬಗ್ಗೆಯೂ ಪ್ರಯತ್ನ ನಡೆಯಬೇಕು. ಪ್ರಶಸ್ತಿ, ಸನ್ಮಾನಕ್ಕೆ ಅರ್ಜಿ ಹಾಕುವುದು, ಶಿಫಾರಸು ಮಾಡುವುದು ನಾಚಿಕೆಗೇಡಿನ ವಿಚಾರ. ಯಾವುದೇ ಶಿಫಾರಸು, ಅರ್ಜಿ ಇಲ್ಲದೆ ಗೌರವ ಸಿಕ್ಕರೆ ಅದರ ಮೌಲ್ಯ ಹೆಚ್ಚು ಎಂದು ಸಮ್ಮೇಳನದ ಅಧ್ಯಕ್ಷ ಚಿದಂಬರ ಬೈಕಂಪಾಡಿ ಪ್ರತಿಪಾದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net