ರಂಗಭೂಮಿಯಿಂದ ಸದೃಢ ಸಮಾಜ ನಿರ್ಮಾಣಕ್ಕೆ ವೇದಿಕೆ

 ಸುರಭಿ ಸಂಸ್ಥೆಯ 26ನೇ ವಾರ್ಷಿಕೋತ್ಸವ ಹಾಗೂ ಸುರಭಿ ಜೈಸಿರಿ-2026 ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಡಾ.ಗೋವಿಂದ ಬಾಬು ಪೂಜಾರಿ ಉದ್ಘಾಟಿಸಿದರು. ಪ್ರಮುಖರಾದ ಆನಂದ ಮದ್ದೋಡಿ, ಸತೀಶ ಬಟ್ಟಾಡಿ, ಶರತ್‌ಕುಮಾರ್ ಶೆಟ್ಟಿ, ಧನಾಕ್ಷಿ ವಿಶ್ವನಾಥ್ ಉಪಸ್ಥಿತರಿದ್ದರು.
ಸುರಭಿ ಸಂಸ್ಥೆಯ 26ನೇ ವಾರ್ಷಿಕೋತ್ಸವ ಹಾಗೂ ಸುರಭಿ ಜೈಸಿರಿ-2026 ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಡಾ.ಗೋವಿಂದ ಬಾಬು ಪೂಜಾರಿ ಉದ್ಘಾಟಿಸಿದರು. ಪ್ರಮುಖರಾದ ಆನಂದ ಮದ್ದೋಡಿ, ಸತೀಶ ಬಟ್ಟಾಡಿ, ಶರತ್‌ಕುಮಾರ್ ಶೆಟ್ಟಿ, ಧನಾಕ್ಷಿ ವಿಶ್ವನಾಥ್ ಉಪಸ್ಥಿತರಿದ್ದರು.
Published on
ವಿಜಯವಾಣಿ ಸುದ್ದಿಜಾಲ ಬೈಂದೂರು
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕಲೆಯ ವಿವಿಧ ಪ್ರಾಕಾರಗಳನ್ನು ಕಲಿಸುತ್ತಾ ಅವರ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿ ಸೂಕ್ತ ವೇದಿಕೆ ಮೂಲಕ ರಂಗಭೂಮಿಯಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹ ನೀಡಬೇಕು. ಆ ಮೂಲಕ ಧನಾತ್ಮಕ ಹಾಗೂ ಸದೃಢ ಸಮಾಜ ನಿರ್ಮಾಣ ಸಾಧ್ಯವಾಗುವುದರೊಂದಿಗೆ ಸಮಾಜದಲ್ಲಿ ಕ್ರೀಯಾಶೀಲ ಬದುಕು ಕಾಣಬಹುದು ಎಂದು ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಡಾ.ಗೋವಿಂದ ಬಾಬು ಪೂಜಾರಿ ಹೇಳಿದರು.
ಶಾರದಾ ವೇದಿಕೆಯಲ್ಲಿ ಸುರಭಿ ಸಂಸ್ಥೆ 26ನೇ ವಾರ್ಷಿಕೋತ್ಸವ ಹಾಗೂ ಸುರಭಿ ಜೈಸಿರಿ-2026 ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಸುರಭಿ ಅಧ್ಯಕ್ಷ ಆನಂದ ಮದ್ದೋಡಿ ಅಧ್ಯಕ್ಷತೆ ವಹಿಸಿದ್ದರು. ಯಕ್ಷಗುರು ದಾರಿಮಕ್ಕಿ ಪ್ರಶಾಂತ ಮಯ್ಯ ಅವರಿಗೆ ಗುರುವಂದನೆ ಸಲ್ಲಿಸಲಾಯಿತು. ಡಾ.ಶಿವರಾಮ ಕಾರಂತ್ ಬಾಲಪ್ರತಿಭೆ ಪ್ರಶಸ್ತಿ ಪುರಸ್ಕೃತೆ ಕೃತಿಕಾ ಕೃಷ್ಣ ಗಾಣಿಗ ಅವರನ್ನು ಸನ್ಮಾನಿಸಲಾಯಿತು. ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಸತೀಶ ಬಟ್ಟಾಡಿ, ಉದ್ಯಮಿ ಶರತ್‌ಕುಮಾರ್ ಶೆಟ್ಟಿ, ಕೊಲ್ಲೂರು ದೇವಳ ವ್ಯವಸ್ಥಾಪನಾ ಸಮಿತಿ ಸದಸ್ಯೆ ಧನಾಕ್ಷಿ ವಿಶ್ವನಾಥ್, ಬೈಂದೂರು ಸೇನೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯ ದೊಟ್ಟಯ್ಯ ಪೂಜಾರಿ, ತಾಲೂಕು ಕಸಾಪ ಅಧ್ಯಕ್ಷ ಅರುಣಕುಮಾರ್ ಉಪಸ್ಥಿತರಿದ್ದರು.
ಸುರಭಿ ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಸ್ವಾಗತಿಸಿದರು. ನಿರ್ದೇಶಕ ಸುಧಾಕರ ಪಿ. ಪ್ರಸ್ತಾವನೆಗೈದರು. ಶ್ರೀಧರ ವಿಶ್ವಕರ್ಮ ವಂದಿಸಿದರು. ಉಪಾಧ್ಯಕ್ಷ ಭಾಸ್ಕರ ಬಾಡ ಹಾಗೂ ಸದಸ್ಯ ಉದಯ್ ನಿರೂಪಿಸಿದರು.

ಬಾಲ್ಯದಿಂದಲೇ ಮಕ್ಕಳಿಗೆ ಸಾಂಸ್ಕೃತಿಕ, ಸಾಹಿತ್ಯಿಕ ಗೀಳು ಹೆಚ್ಚಿಸಬೇಕು. ಇದರಿಂದ ಅವರು ಸಾಮಾಜಿಕ ಜಾಲತಾಣ ಸೇರಿದಂತೆ ಇತರ ಮಾಧ್ಯಮಗಳಿಂದ ದೂರವಾಗುತ್ತಾರೆ. ಕಲಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಮಗು ಮುಂದೆ ಉತ್ತಮ ಕಾರ್ಯಗಳಲ್ಲಿಯೇ ಮುಂದುವರಿಯುತ್ತದೆ. ಸಾಂಸ್ಕೃತಿಕ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಕಾರ್ಯವಾದಾಗ ಮುಂದಿನ ಪೀಳಿಗೆಗೆ ಉತ್ತಮವಾದುದನ್ನು ಕೊಡಲು ಸಾಧ್ಯವಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net