ತಾಲೂಕು ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಲು ವೈದ್ಯರಿಲ್ಲ

ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಬಂಟ್ವಾಳ ತಾಲೂಕು ಸರ್ಕಾರಿ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಎಸ್.ತಿಮ್ಮಯ್ಯ, ಲಾವಣ್ಯ ಬಲ್ಲಾಳ್ ಮೊದಲಾದವರಿದ್ದರು.
ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಬಂಟ್ವಾಳ ತಾಲೂಕು ಸರ್ಕಾರಿ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಎಸ್.ತಿಮ್ಮಯ್ಯ, ಲಾವಣ್ಯ ಬಲ್ಲಾಳ್ ಮೊದಲಾದವರಿದ್ದರು.
Published on
ಬಂಟ್ವಾಳ: ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಬಂಟ್ವಾಳದ ಸಾಂತ್ವನ ಕೇಂದ್ರ ಹಾಗೂ ತಾಲೂಕು ಸರ್ಕಾರಿ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ತಾಲೂಕುಮಟ್ಟದ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಲು ವೈದ್ಯರಿಲ್ಲ. ಸರ್ಕಾರ ಇಷ್ಟೊಂದು ವ್ಯವಸ್ಥೆ, ಮೂಲಸೌಕರ್ಯ ನೀಡಿದ ಮೇಲೆ ತಜ್ಞ ವೈದ್ಯರೂ ಬೇಕು. ಔಷಧಗಳ ದಾಸ್ತಾನು ಇದ್ದರೂ ರೋಗಿಗಳನ್ನು ಹೊರಗೆ ಕಳುಹಿಸುವ ಕುರಿತು ದೂರುಗಳು ಇವೆ ಎಂದರು.
ಈ ಸಂದರ್ಭ ಮಾತನಾಡಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಎಸ್.ತಿಮ್ಮಯ್ಯ, ಖಾಸಗಿ ಮೆಡಿಕಲ್ ಕಾಲೇಜಿನೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಶೀಘ್ರ ಆಸ್ಪತ್ರೆಯ ವೈದ್ಯರ ಸಮಸ್ಯೆಗೆ ಪರಿಹಾರ ದೊರಕಲಿದೆ ಎಂದರು.
ಮಧ್ಯಾಹ್ನ ಬಿ.ಸಿ.ರೋಡ್‌ನ ಸಾಂತ್ವನ ಕೇಂದ್ರಕ್ಕೆ ಭೇಟಿ ನೀಡಿ ಸಿಬ್ಬಂದಿ ವಿದ್ಯಾ ಮತ್ತು ಪ್ರಶಾಂತ್ ಅವರಿಂದ ಮಾಹಿತಿ ಪಡೆದುಕೊಂಡರು. ಬಳಿಕ ಜನಶಿಕ್ಷಣ ಟ್ರಸ್ಟ್‌ನ ಶೀನ ಶೆಟ್ಟಿ ಮತ್ತು ಕೃಷ್ಣ ಮೂಲ್ಯ ಅವರು ಮಹಿಳಾ ಸಬಲೀಕರಣದ ಚಟುವಟಿಕೆ ಕುರಿತು ಮಾಹಿತಿ ನೀಡಿದರು.
ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ ಅಧ್ಯಕ್ಷೆ ಲಾವಣ್ಯ ಬಲ್ಲಾಳ್, ಗ್ಯಾರಂಟಿ ಸಮಿತಿ ಸದಸ್ಯೆ ಐಡಾ ಸುರೇಶ್, ಸಿರಾಜ್ ಮದಕ, ತಾಪಂ ಇಒ ಸಚಿನ್ ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಶಿಶು ಅಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಉಸ್ಮಾನ್, ತಾಲೂಕು ಅಧಿಕಾರಿ ಮಮ್ತಾಜ್, ತಾಲೂಕು ಆರೋಗ್ಯಾಧಿಕಾರಿ ಡಾ.ಅಶೋಕ್ ಕುಮಾರ್ ರೈ, ತಾಲೂಕು ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಪುಷ್ಪಲತಾ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ವೆಂಕಪ್ಪ ಪೂಜಾರಿ, ವಕೀಲೆ ಶೈಲಜಾ ರಾಜೇಶ್, ಪ್ರಮುಖರಾದ ಅಬ್ಬಾಸ್ ಆಲಿ, ಜೋಸ್ಫಿನ್ ಡಿಸೋಜ, ಐಡಾ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net