ಪಿಒಪಿ ಗಣಪತಿ ವಿಗ್ರಹಗಳ ಪ್ರತಿಷ್ಠಾಪನೆಗೆ ನಗರ, ಗ್ರಾಮೀಣ, ಸ್ಥಳೀಯ ಸಂಸ್ಥೆಗಳು, ಪೊಲೀಸ್ ಇಲಾಖೆ ಸಹಿತ ವಿವಿಧ ಇಲಾಖೆಗಳು ಪರವಾನಗಿ ನೀಡಬಾರದು. ಆವೆ ಮಣ್ಣಿನಲ್ಲಿ ಗಣಪತಿ ವಿಗ್ರಹ ತಯಾರಿಕೆಗೆ ಉತ್ತೇಜನ ನೀಡಬೇಕು. ಹಬ್ಬದಂದು ಬಳಸಿದ ಹೂ, ಅಲಂಕಾರಿಕ ಸಾಮಗ್ರಿಯನ್ನು ತೆಗೆದು ಸೂಕ್ತ ವಿಲೇವಾರಿ ಮಾಡಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ ರಾತ್ರಿ 10ರಿಂದ ಬೆಳಗ್ಗೆ 6ರ ತನಕ ಮೈಕ್ ಬಳಸುವಂತಿಲ್ಲ. ಸಾರ್ವಜನಿಕ ಗಣೇಶೋತ್ಸವ ಸಮಿತಿಗಳೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಜಲಮೂಲಗಳ ಮೇಲೆ ಮಂಡಳಿ ನಿಗಾ ಇಡಲಿದೆ ಎಂದರು.