ಉಡುಪಿ: ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಉಡುಪಿ ಭಾಗದ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಹಾಗೂ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಆ.12ರಂದು ಮಧ್ಯಾಹ್ನ 3:30ಕ್ಕೆ 'ತಿರಂಗಾ ಯಾತ್ರೆ' (ದೇಶಕ್ಕಾಗಿ ದೇಶಭಕ್ತರ ನಡಿಗೆ) ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.
ಮಣಿಪಾಲದ ಕೆನರಾ ಬ್ಯಾಂಕ್ನ ಪ್ರಾದೇಶಿಕ ಕಚೇರಿಯ ಮುಂಭಾಗದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಸಾಮಾಜಿಕ, ಶೈಕ್ಷಣಿಕ ಹಾಗೂ ಸಹಕಾರಿ ಕ್ಷೇತ್ರದ ವಿವಿಧ ಗಣ್ಯರು ತಿರಂಗಾ ಯಾತ್ರೆಗೆ ಚಾಲನೆ ನೀಡಲಿದ್ದಾರೆ.
ತಿರಂಗಾ ಯಾತ್ರೆಯು ಮಣಿಪಾಲ ಕೆನರಾ ಬ್ಯಾಂಕ್ನ ಪ್ರಾದೇಶಿಕ ಕಚೇರಿಯ ಮುಂಭಾಗದಿಂದ ಹೊರಟು ಟೈಗರ್ ಸರ್ಕಲ್, ಸಿಂಡಿಕೇಟ್ ಸರ್ಕಲ್ ಮೂಲಕ ಸಾಗಿ ಜಿಲ್ಲಾಧಿಕಾರಿ ಕಚೇರಿ ಮಾರ್ಗದಲ್ಲಿರುವ ಕಾಯಿನ್ ಸರ್ಕಲ್ ಬಳಿ ಸಮಾಪನಗೊಳ್ಳಲಿದೆ.
ಸಾರ್ವಜನಿಕರು, ದೇಶಭಕ್ತ ಬಂಧುಗಳು ಪಾಲ್ಗೊಂಡು ದೇಶಭಕ್ತಿಯ ಪ್ರತೀಕವಾದ ತಿರಂಗಾ ಯಾತ್ರೆ ಯಶಸ್ವಿಗೊಳಿಸಬೇಕು ಎಂದು ಶಾಸಕ ಯಶ್ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.