

ಕುಂದಾಪುರ: ಅತ್ತಿಗೆಯ ಬಗ್ಗೆ ಕಟ್ಟದಾಗಿ ಮಾತನಾಡಿದ್ದಾನೆ ಎನ್ನಲಾದ ಆರೋಪಿಯ ಬಳಿ ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ಆರೋಪಿ ಚೂರಿಯಿಂದ ಹೊಟ್ಟೆಗೆ ತಿವಿದು ಕೊಲೆ ಬೆದರಿಕೆ ಹಾಕಿದ ಪರಿಣಾಮ ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ತಲ್ಲೂರು ಗ್ರಾಮದ ಪಿಂಗಾಣಿಗುಡ್ಡೆ ಎಂಬಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಪಿಂಗಾಣಿಗುಡ್ಡೆ ನಿವಾಸಿ ಆಕಾಶ್ ಎಂದು ಗುರುತಿಸಲಾಗಿದೆ. ಚೂರಿ ಇರಿತಕ್ಕೊಳಗಾಗಿ ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ರಾಮ ಕುಮಾರ್ ಎಂದು ಗುರುತಿಸಲಾಗಿದೆ.