ಎಂಡಿಎಂಎ ಸಾಗಿಸುತ್ತಿದ್ದ ಮೂವರು ಅರೆಸ್ಟ್

 ಜುಬೈದ್, ಸವಾದ್, ರಶೀದ್
ಜುಬೈದ್, ಸವಾದ್, ರಶೀದ್
Published on
ಬಂಟ್ವಾಳ: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ ಬೇಧಿಸಿರುವ ಬಂಟ್ವಾಳ ನಗರ ಠಾಣಾ ಪೊಲೀಸರು ಮಾದಕ ವಸ್ತು ಸಹಿತ ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಮೆಲ್ಕಾರ್ ಬಳಿ ಗುರುವಾರ ನಡೆದಿದೆ.
ಬಂಧಿತ ಆರೋಪಿಗಳನ್ನು ಪುದು ಗ್ರಾಮದ ನಿವಾಸಿ ಎ.ಜುಬೈರ್(39), ಸಜಿಪಮುನ್ನೂರು ಗ್ರಾಮದ ನಿವಾಸಿ ಮೊಹಮ್ಮದ್ ಸವಾದ್ (36) ಹಾಗೂ ಬಿ.ಮೂಡ ಗ್ರಾಮದ ನಿವಾಸಿ ಬಿ.ಎಂ.ರಶೀದ್ ಯಾನೆ ಮಾರಿಮುತ್ತು ಎಂದು ಹೆಸರಿಸಲಾಗಿದೆ.
ಜೂನ್ 4ರಂದು ಸಂಜೆ, ಬಂಟ್ವಾಳ ನಗರ ಪೊಲೀಸ್ ಠಾಣಾ ಪಿಎಸ್‌ಐ ಸಂದೀಪ್ ಕುಮಾರ್ ಶೆಟ್ಟಿ ಠಾಣಾ ಸಿಬ್ಬಂದಿಯೊಂದಿಗೆ ಮೆಲ್ಕಾರ್ ಫ್ಲೈಓವರ್ ಬಳಿ ಕಾರೊಂದನ್ನು ತಪಾಸಣೆಗಾಗಿ ನಿಲ್ಲಿಸಿದ್ದು, ಸದ್ರಿ ಕಾರಿನಲ್ಲಿ ಚಾಲಕ ಹಾಗೂ ಇಬ್ಬರು ಪ್ರಯಾಣಿಕರಿದ್ದರು. ಕಾರನ್ನು ಪರಿಶೀಲಿಸಿದಾಗ ಡ್ರಗ್ಸ್ ಸೇವಿಸಲು ಬಳಸುವ ಸಾಧನ ಕಂಡುಬಂದಿದ್ದು, ವಿಚಾರಿಸಿದಾಗ ಎಂಡಿಎಂಎ ಮಾರಾಟ ಮಾಡುವ ಉದ್ದೇಶದಿಂದ ಸಾಗಿಸುತ್ತಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ.
ತಪಾಸಣೆ ನಡೆಸಿದಾಗ ಆರೋಪಿಗಳ ಬಳಿ ಹಾಗೂ ಕಾರಿನಲ್ಲಿ 7.64 ಲಕ್ಷ ರೂ. ಮೌಲ್ಯದ 76.40 ಗ್ರಾಂ ಎಂಡಿಎಂಎ ಮಾದಕ ವಸ್ತು ಹಾಗೂ ಮಾದಕ ವಸ್ತು ಸೇವನೆ ಮಾಡಲು ಉಪಯೋಗಿಸುವ ಸಾಧನ ಪತ್ತೆಯಾಗಿದೆ. 3 ಮೊಬೈಲ್ ಫೋನ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net