ಶಿರಾಡಿಯಲ್ಲಿ ಸರಣಿ ಅಪಘಾತ, ಮೂವರಿಗೆ ಗಾಯ

 ಅಪಘಾತದಿಂದ ಮೂರೂ ವಾಹನಗಳ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿರುವುದು.
ಅಪಘಾತದಿಂದ ಮೂರೂ ವಾಹನಗಳ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿರುವುದು.
Published on

ಉಪ್ಪಿನಂಗಡಿ: ಶಿರಾಡಿ ಗ್ರಾಮದ ಬರ್ಚಿನಹಳ್ಳ ಸಮೀಪ ಟ್ಯಾಂಕರ್, ಬಸ್, ಮತ್ತು ಲಾರಿ ನಡುವೆ ಬುಧವಾರ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಕೆಎಸ್ಸಾರ್ಟಿಸಿ ಬಸ್ ಚಾಲಕ ಪಾಪಿ ರೆಡ್ಡಿ ಎಸ್., ಬಸ್ ನಿರ್ವಾಹಕ ಮಲ್ಲಿಕಾರ್ಜುನ್ ಮತ್ತು ಟ್ಯಾಂಕರ್ ಚಾಲಕ ಅನಿಲ್ ಎಂದು ಗುರುತಿಸಲಾಗಿದೆ. ಸಕಲೇಶಪುರದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಟ್ಯಾಂಕರ್ ಓವರ್ ಟೇಕ್ ಮಾಡುವ ಭರದಲ್ಲಿ ಗುಂಡ್ಯ ಕಡೆಯಿಂದ ಸಕಲೇಶಪುರ ಕಡೆಗೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಇದೇ ಟ್ಯಾಂಕರ್ ಎಡಕ್ಕೆ ಚಲಿಸಿ ಹಿಂದಿನಿಂದ ಬರುತ್ತಿದ್ದ ಲಾರಿ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ. ಮೂರೂ ವಾಹನಗಳ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.
ಗಾಯಾಳುಗಳನ್ನು ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಟ್ಯಾಂಕರ್ ಚಾಲಕ ಅನಿಲ್ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net