ಬಸ್‌ಗಳು ಡಿಕ್ಕಿಯಾಗಿ ಮೂವರು ಗಂಭೀರ

ಅರಾಟೆ ಸೇತುವೆ ಬಳಿ ದುರ್ಘಟನೆ
 ಹೆಮ್ಮಾಡಿ ಸಮೀಪದ ಮೂವತ್ತುಮುಡಿ ಸಮೀಪದ ಅರಾಟೆ ಸೇತುವೆ ಬಳಿ ಖಾಸಗಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವುದು.
ಹೆಮ್ಮಾಡಿ ಸಮೀಪದ ಮೂವತ್ತುಮುಡಿ ಸಮೀಪದ ಅರಾಟೆ ಸೇತುವೆ ಬಳಿ ಖಾಸಗಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವುದು.
Published on: 

ಕುಂದಾಪುರ: ಹೆಮ್ಮಾಡಿ ಸಮೀಪದ ಮೂವತ್ತುಮುಡಿ ಸಮೀಪದ ಅರಾಟೆ ಸೇತುವೆ ಬಳಿ ಭಾನುವಾರ ಬೆಳಗ್ಗೆ ಎರಡು ಖಾಸಗಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 28 ಪ್ರಯಾಣಿಕರು ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.

ಕುಂದಾಪುರ ಕಡೆಯಿಂದ ಬೈಂದೂರಿನತ್ತ ಸಾಗುತ್ತಿದ್ದ ಖಾಸಗಿ ಬಸ್‌ಗೆ ಮಂತ್ರಾಲಯದಿಂದ ಮಂಗಳೂರಿನತ್ತ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಬಸ್ ತಿರುಗಿ ಹಿಂಬದಿ ಬರುತ್ತಿದ್ದ ಗೂಡ್ಸ್ ವಾಹನಕ್ಕೆ ಡಿಕ್ಕಿಯಾಗಿದೆ. ಗಾಯಾಳುಗಳನ್ನು ಮಣಿಪಾಲ ಹಾಗೂ ಕುಂದಾಪುರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅಪಘಾತದಿಂದ ರಾ.ಹೆ.66ರಲ್ಲಿ ಒಂದೂವರೆ ಗಂಟೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net