ಅಪಘಾತದ ತೀವ್ರತೆಗೆ ಇಬ್ಬರೂ ರಕ್ತಸಿಕ್ತವಾಗಿ ರಸ್ತೆಯಲ್ಲಿ ಬಿದ್ದಿದ್ದು, ಗಾಯಾಳುಗಳ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ತಕ್ಷಣವೇ ಸ್ಥಳೀಯರು ಸ್ಪಂದಿಸಿ, ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಿದ್ದಾರೆ. ಘಟನೆಯಿಂದ ಸ್ಥಳದಲ್ಲಿ ಜನ ಜಮಾಯಿಸಿ ಕೆಲಹೊತ್ತು ವಾಹನ ದಟ್ಟಣೆ ಉಂಟಾಗಿ ಸಂಚಾರ ಅಸ್ತವ್ಯಸ್ತವಾಯಿತು. ಟಿಪ್ಪರ್ ಲಾರಿಯನ್ನು ಸಂಚಾರ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.