ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರವಾಸೋದ್ಯಮ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಇತಿಹಾಸ ಪ್ರಸಿದ್ಧವಾದ ಬಾರ್ಕೂರು ಒಮ್ಮೆ ಆಳುಪ ವಂಶದ ರಾಜಧಾನಿಯಾಗಿದ್ದು, ಪ್ರತಿದಿನವೂ ರಥೋತ್ಸವ ನಡೆಯುತ್ತಿದ್ದುದಾಗಿ ಪರಂಪರೆಯಲ್ಲಿ ಉಲ್ಲೇಖಗಳಿವೆ. ಹೀಗಾಗಿ ಗತವೈಭವ ಮರುಕಳಿಸುವ ನಿಟ್ಟಿನಲ್ಲಿ ಸಮಗ್ರ ವರದಿ ಮತ್ತು ಕಾರ್ಯಯೋಜನೆ ಸಿದ್ಧಪಡಿಸಲು ತಜ್ಞರ ಸಮಿತಿಯನ್ನು ರಚಿಸಲಾಗುವುದು ಎಂದು ಹೇಳಿದರು.