ಪ್ರವಾಸೋದ್ಯಮ ಇಲಾಖೆ ವತಿಯಿಂದ ಕರ್ನಾಟಕ ಟೂರಿಸಂ ಡೆವಲಪ್‌ಮೆಂಟ್‌ನಿಂದ ಇಲ್ಲಿ 9.95 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕಳೆದೆರಡು ವರ್ಷಗಳಿಂದ ನಡೆಯುತ್ತಿದೆ. ಸೀವಾಕ್, ವಿಶಾಲ ಪಾರ್ಕಿಂಗ್ ವ್ಯವಸ್ಥೆ, ಫುಡ್ ಕೋರ್ಟ್, ಸೈಕಲ್ ಟ್ರ್ಯಾಕ್, ಮಕ್ಕಳ ಪಾರ್ಕ್ ಸಹಿತ ವಿವಿಧ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಬೀಚ್‌ನಲ್ಲಿ ಸರಿಯಾದ ಬೆಳಕಿನ ವ್ಯವಸ್ಥೆಯಿಲ್ಲದ ಕಾರಣ ಈಗ ಅಕ್ರಮ ಚಟುವಟಿಕೆಗಳ ತಾಣವಾಗಿ ಬದಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.