ಎರಡೂ ವರದಿಯೂ ಸಹ ಅತಿ ಪ್ರಮುಖವಾದ ದಾಖಲೆಯಾಗಿದ್ದು ಎಲ್ಲ ಇಲಾಖಾಧಿಕಾರಿಗಳು ತಯಾರಿಕೆಯ ಪ್ರಕ್ರಿಯೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು. ವರದಿಯು ಗ್ರಾಪಂ ಹಂತದಿಂದಲೇ ಮಾನವ ಅಭಿವೃದ್ಧಿಗೆ ಆದ್ಯತೆ ನೀಡುವಂತೆ ಇರಬೇಕು. ಶಿಕ್ಷಣ, ಆರೋಗ್ಯ, ಪೋಷಣಾ ಸ್ಥಿತಿ, ಮೂಲಸೌಕರ್ಯ, ಸಾಮಾಜಿಕ ಒಳಗೊಳ್ಳುವಿಕೆ ಹಾಗೂ ಪರಿಸರದ ಸುಸ್ಥಿರತೆ ಸೇರಿದಂತೆ ವಿವಿಧ ಮಾನವ ಅಭಿವೃದ್ಧಿ ಸೂಚ್ಯಂಕಗಳ ಆಧಾರದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಸಾಧಿಸುವುದು ಈ ವರದಿಗಳ ಗುರಿಯಾಗಿದೆ ಎಂದರು.