ಸುಬ್ರಹ್ಮಣ್ಯ: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸೇವಿಸಿ ಅಸ್ವಸ್ಥಗೊಂಡು ನಿತ್ರಾಣ ಸ್ಥಿತಿಯಲ್ಲಿದ್ದ ಹೋರಿಗೆ ಚಿಕಿತ್ಸೆ ನೀಡಿ ರಕ್ಷಿಸಲಾಯಿತು.
ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪಶು ವೈದ್ಯಾಧಿಕಾರಿಗಳು ಹೋರಿಗೆ ಸೂಕ್ತ ಚಿಕಿತ್ಸೆ ನೀಡಿದ್ದು, ಸಮಯೋಚಿತ ವೈದ್ಯಕೀಯ ನೆರವಿನಿಂದ ಪ್ರಾಣ ಉಳಿಸಲಾಗಿದೆ. ಹೋರಿಯ ಚಿಂತಾಜನಕ ಸ್ಥಿತಿಯನ್ನು ಗಮನಿಸಿದ ಸ್ಥಳೀಯರು ತಕ್ಷಣ ಸ್ಪಂದಿಸಿ ರಕ್ಷಣಾ ಕಾರ್ಯದಲ್ಲಿ ಕೈಜೋಡಿಸಿದರು.
ರವಿ ಕಕ್ಕೆಪದವು, ಪ್ರಶಾಂತ್ ಆಚಾರ್ಯ, ಅಶ್ವಥ್ ಮೊದಲಾದವರು ನೆರವಾದರು. ಕ್ಷೇತ್ರಕ್ಕೆ ಆಗಮಿಸುವ ಭಕ್ತರು ತ್ಯಾಜ್ಯಗಳನ್ನು ನಿಗದಿತ ಸ್ಥಳಗಳಲ್ಲೇ ವಿಲೇವಾರಿ ಮಾಡಿ, ಪರಿಸರ ಸ್ನೇಹಿ ನಡವಳಿಕೆ ಮೂಲಕ ಸ್ವಚ್ಛ ಮತ್ತು ಸುಂದರ ಕುಕ್ಕೆ ಕ್ಷೇತ್ರ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.