

ಉಡುಪಿ: ಜನರನ್ನು ತಲುಪಲು ಪ್ರದೇಶದ ಭಾಷೆಯ ಕಲಿಕೆ ಅತೀ ಅವಶ್ಯವಾಗಿದೆ. ತುಳು ಭಾಷೆಯನ್ನು ಅಧಿಕೃತ ಭಾಷೆಯನ್ನಾಗಿ ಮಾಡಿರುವುದು ಹೆಮ್ಮೆಯ ವಿಚಾರ. ಕಲೆ, ಭಾಷಾ ಸಂಸತಿಯಲ್ಲಿ ಶ್ರೀಮಂತಿಕೆಯನ್ನು ಹೊಂದಿರುವ ತುಳುನಾಡು ಪ್ರತಿಯೊಂದು ಕ್ಷೇತ್ರದಲ್ಲಿಯೂ ರಾಜ್ಯದ ಅಭಿವೃದ್ಧಿಗೆ ನೀಡಿರುವ ಕೊಡುಗೆ ಮಹತ್ತರದಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು.
ಶುಕ್ರವಾರ ರಜತಾದ್ರಿಯ ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ನಡೆದ ತುಳು ಭಾಷಾ ಕಲಿಕೆ ಮತ್ತು ಸಂಸ್ಕೃತಿ ಪರಿಚಯ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ತುಳು ಭಾಷೆ ಕಲೆ ಸಂಸತಿಯನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಕಾರ್ಯಾಗಾರವನ್ನು ಆಯೋಜಿಸಲಾಗಿದ್ದು, ಪ್ರತಿಯೊಬ್ಬರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತಿಕ್ ಬಾಯಲ್ ಮಾತನಾಡಿ, ಪ್ರದೇಶಗಳು ಬದಲಾದಂತೆ ಸಂಸತಿ ಹಾಗೂ ಭಾಷೆಗಳು ವಿಭಿನ್ನವಾಗಿರುತ್ತದೆ. ಯಾವುದೇ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದರೂ ಸ್ಥಳಿಯ ಭಾಷೆ, ಸಂಸತಿಯನ್ನು ಅರಿಯುವ ಪ್ರಯತ್ನ ಮಾಡಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಮಾತನಾಡಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ. ಗಣನಾಥ ಎಕ್ಕಾರು, ನಿವೃತ್ತ ಪ್ರಾಂಶುಪಾಲ ಮತ್ತು ಸಾಹಿತಿ ಡಾ. ವಿ.ಕೆ. ಯಾದವ್ ಸಸಿಹಿತ್ಲು ಉಪಸ್ಥಿತರಿದ್ದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಸದಸ್ಯರಾದ ಉದ್ಯಾವರ ನಾಗೇಶ್ ಕುಮಾರ್ ನಿರೂಪಿಸಿ, ಸಂತೋಷ್ ಶೆಟ್ಟಿ ಹಿರಿಯಡ್ಕ ವಂದಿಸಿದರು.