ಆರೋಪಿ ಹಾಗೂ ಆತನ ಕೃತ್ಯಕ್ಕೆ ಸಹಕರಿಸಿದವರ ಪತ್ತೆ ಕಾರ್ಯಾಚರಣೆಯಲ್ಲಿ ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಪಿ. ಮಾರ್ಗದರ್ಶನದಲ್ಲಿ ಠಾಣೆಯ ಪಿಎಸ್ಐ ರತ್ನಾಕರ ಕೆ. ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಎಎಸ್ಐ ಲೋಕೇಶ್, ಸಿಬ್ಬಂದಿ ಸಂತೋಷ್, ಜಗನ್ನಾಥ್ ನಾಯ್ಕ್, ಆನಂದ್, ಆನಂದಯ್ಯ ಹಾಗೂ ಮಣಿಪಾಲ ಠಾಣೆಯ ಮಲ್ಲಯ್ಯ ಹಿರೇಮಠ, ಹೇಮಂತ್, ಉಡುಪಿ ನಗರ ಠಾಣೆಯ ಸಿಬ್ಬಂದಿ ಸಹಕರಿಸಿದ್ದರು.