ಎರ್ಮಾಳ್ ತೆಂಕ ನಿವಾಸಿ ಚಿರಾಗ್ ಪೂಜಾರಿ (26), ಹಾಗೂ ಮೊಹಮ್ಮದ್ ಇರ್ಷಾದ್ (43) ಬಂಧಿತರು. ಬಂಧಿತ ಆರೋಪಿಗಳನ್ನು ವಿಚಾರಣೆಗೊಳಪಡಿಸಿ ಪ್ರಕರಣದ ಕುರಿತು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ. ಇವರಿಬ್ಬರು ಕೃತ್ಯಕ್ಕೆ ಹಣ ವರ್ಗಾವಣೆ ಮಾಡಲು ಸಹಾಯ ಮಾಡಿ ಆರೋಪಿಗಳಿಗೆ ಸಹಕರಿಸಿದ್ದಾರೆ. ಪ್ರಕರಣದಲ್ಲಿ ಈಗಾಗಲೇ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ದಸ್ತಗಿರಿಗೊಳಿಸಿದ್ದು, ತನಿಖೆ ಮುಂದುವರಿದಿದೆ. ಮೋಟಾರ್ ಸೈಕಲ್‌ನಲ್ಲಿ ಬಂದ ಆರೋಪಿಗಳು ಡೇವಿಡ್ ಅವರನ್ನು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.