

ಕುಂದಾಪುರ: ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಸಮೀಪದ ಕೊಪ್ಪರಿಗೆ ಗುಡ್ಡೆ ಕಡುಬಿನ ಕೆರೆಯಲ್ಲಿ ಬಟ್ಟೆ ಒಗೆಯಲು ತೆರಳಿದ್ದ ಇಬ್ಬರು ಬಾಲಕಿಯರು ಭಾನುವಾರ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ.
ಹಾವೇರಿ ಜಿಲ್ಲೆಯ ಶಿಗಾಂವ್ ತಾಲೂಕಿನ ಮುದ್ದಿನಕೊಪ್ಪ ಮೂಲದ, ಪ್ರಸ್ತುತ ಮುಳ್ಳಿಕಟ್ಟೆ ಟೆಂಟ್ ಹೌಸ್ನಲ್ಲಿ ವಾಸವಾಗಿದ್ದ ಚಂದ್ರು ಬಸವರಾಜ ವೇಷಗಾರ ಎಂಬುವರ ಪುತ್ರಿ ಸುನೀತಾ(13) ಹಾಗೂ ಅವರ ಸಂಬಂಧಿ ದಿ.ಮಂಜುನಾಥ್ ಎಂಬುವರ ಪುತ್ರಿ ವೈಶಾಲಿ(13) ಮೃತಪಟ್ಟ ದುರ್ದೈವಿಗಳು. ಇವರಿಬ್ಬರೂ ಹೊಸಾಡಿನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ವಾಡುತ್ತಿದ್ದರು.
ಟನೆ ವಿವರ: ಭಾನುವಾರ ಸಂಜೆ ಟೆಂಟ್ ಹೌಸ್ ನಿವಾಸಿ 5 ಮಕ್ಕಳು ಬಟ್ಟೆ ತೊಳೆಯಲು ಕೊಪ್ಪರಿಗೆ ಗುಡ್ಡೆಯ ಕಡುಬಿನ ಕೆರೆಗೆ ತೆರಳಿದ್ದರು. ಕೆರೆಯ ದಡದಲ್ಲಿ ಸುನೀತಾ ಹಾಗೂ ವೈಶಾಲಿ ಬಟ್ಟೆ ಒಗೆಯುತ್ತಿದ್ದರು. ಈ ವೇಳೆ ಸುನೀತಾ ಕಾಲು ಜಾರಿ ಕೆರೆಗೆ ಬಿದ್ದಿದ್ದು, ಆಕೆಯನ್ನು ರಕ್ಷಿಸಲು ಯತ್ನಿಸಿದ ವೈಶಾಲಿ ಕೂಡ ನೀರಿನಲ್ಲಿ ಮುಳುಗಿದ್ದಾರೆ.
ಸ್ಥಳದಲ್ಲಿದ್ದ ಇತರ ಮಕ್ಕಳು ವಿಷಯ ತಿಳಿಸಿದ ಹಿನ್ನೆಲೆ ಪಾಲಕರು ಹಾಗೂ ಸಂಬಂಧಿಕರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಮುಳುಗು ತಜ್ಞ ದಿನೇಶ್ ಖಾರ್ವಿ ಹಾಗೂ ಸಾರ್ವಜನಿಕರು ಶೋಧ ನಡೆಸಿದ್ದು, ಸಂಜೆ 5.15ರ ಸುವಾರಿಗೆ ಇಬ್ಬರೂ ಬಾಲಕಿಯರ ಮೃತದೇಹಗಳನ್ನು ಕೆರೆಯಿಂದ ಮೇಲಕ್ಕೆತ್ತಲಾಯಿತು. ಗಂಗೊಳ್ಳಿ ಪೊಲೀಸರು ಶವ ಮಹಜರು ಪ್ರಕ್ರಿಯೆ ನಡೆಸಿದರು. ಮೃತ ಸುನೀತಾ ತಂದೆ ನೀಡಿದ ದೂರಿನನ್ವಯ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.