

ಉಡುಪಿ: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇತ್ತೀಚೆಗೆ ಮಂಗಳೂರಿನಲ್ಲಿ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ 32 ಸಾವಿರ ಕೋಟಿ ರೂ. ಅನುದಾನ ಮಂಜೂರು ಮಾಡಿದ್ದಾರೆ. ಕಾಲೇಜ್ ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಕಲ್ಪಿಸಲು ಉಡುಪಿಯಲ್ಲಿ ಇನ್ನೂ ಎರಡು ಮಹಿಳಾ ವಸತಿ ನಿಲಯ ನಿರ್ಮಿಸಲು ಕ್ರಮ ಕೈಗೊಳ್ಳುವುದಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ಎಸ್. ತಂಗಡಗಿ ಭರವಸೆ ನೀಡಿದರು.
ಉಡುಪಿಯ ಅಜ್ಜರಕಾಡಿನಲ್ಲಿರುವ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜ್ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರಕ್ಕೆ ಶುಕ್ರವಾರ (ಸೆ.25) ಭೇಟಿ ನೀಡಿ ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಮಾತನಾಡಿ, ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡಿದೆ ಎಂದರು.
ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕಾಲೇಜ್ನ ಪ್ರಾಂಶುಪಾಲೆ ಪ್ರೊ. ನಿಕೇತನಾ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ರಾಜೇಂದ್ರ ಕೆ., ಐಕ್ಯೂಎಸಿ ಸಂಚಾಲಕಿ ಪ್ರೊ. ಶ್ರೀಮತಿ ಅಡಿಗ, ಪ್ರಾಧ್ಯಾಪಕರಾದ ಪ್ರೊ. ಪಿ.ಬಿ. ಪ್ರಸನ್ನ, ವಿದ್ಯಾ ಡಿ., ಡಾ. ಮಣಿಭೂಷಣ್ ಡಿಸೋಜ, ಜಯಲಿಂಗ ಮೂರ್ತಿ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.