ಲಾರಿಗೆ ದ್ವಿಚಕ್ರ ವಾಹನಗಳೆರಡು ಡಿಕ್ಕಿ

ACCIDENT
ACCIDENT
Published on

ಪುತ್ತೂರು ಗ್ರಾಮಾಂತರ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ವೇಳೆ ಹಿಂಬದಿಯಿಂದ ಬಂದ ದ್ವಿಚಕ್ರ ವಾಹನವೊಂದು ಲಾರಿಗೆ ಡಿಕ್ಕಿ ಹೊಡೆದ ಘಟನೆ ಒಳಮೊಗ್ರು ಗ್ರಾಮದ ಕೈಕಾರ ಎಂಬಲ್ಲಿ ಸಂಟ್ಯಾರು-ಪಾಣಾಜೆ ರಸ್ತೆಯಲ್ಲಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಸವಾರರು ಗಾಯಗೊಂಡಿದ್ದಾರೆ.

ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ಸಾಲ್ಮರ ನಿವಾಸಿ ಉಮ್ಮರ್ ಫಾರೂಕ್ ಎಂಬುವರು ಸಂಟ್ಯಾರು ಕಡೆಯಿಂದ ಇರ್ದೆ ಕಡೆಗೆ ಲಾರಿಯನ್ನು ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಎದುರುಗಡೆಯಿಂದ ಸುದೀಪ್ ಎಂಬುವರು ಚಲಾಯಿಸಿಕೊಂಡು ಬರುತ್ತಿದ್ದ ಬೈಕ್, ಆಟೋಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಲಾರಿಯ ಮುಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಇದೇ ವೇಳೆ ಅಬೂಬಕ್ಕರ್ ಎಂಬುವರು ಚಲಾಯಿಸಿಕೊಂಡು ಬಂದ ದ್ವಿಚಕ್ರ ವಾಹನ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ್ದಿದ್ದು ಲಾರಿಗೆ ಹಾನಿಯಾಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಸುದೀಪ್ ಮತ್ತು ಅಬೂಬಕ್ಕರ್ ವಾಹನಗಳ ಸಮೇತ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ. ಲಾರಿ ಚಾಲಕ ಉಮ್ಮರ್ ಫಾರೂಕ್ ನೀಡಿರುವ ದೂರಿನಂತೆ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net