ಲಾರಿ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಮೃತ್ಯು

ಆ್ಯಕ್ಸಿಡೆಂಟ್ ಡೆತ್
ಆ್ಯಕ್ಸಿಡೆಂಟ್ ಡೆತ್
Published on
ಬೈಂದೂರು: ಬೈಂದೂರಿನ ಯಡ್ತರೆ ಜಂಕ್ಷನ್ ಯೂಟರ್ನ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಚಾಲಕ ಕಳವಾಡಿಯ ಸುಧಾಕರ ಶೆಟ್ಟಿ(78) ಎಂಬುವರು ಚಿಕಿತ್ಸೆ ಲಕಾರಿಯಾಗದೆ ಮೃತಪಟ್ಟಿದ್ದಾರೆ.
ಗುರುವಾರ ಮಧ್ಯಾಹ್ನ 12ರ ಸುಮಾರಿಗೆ ಸುಧಾಕರ ಶೆಟ್ಟಿ ಅವರು ಒತ್ತಿನೆಣೆ ಕಡೆಯಿಂದ ಬೈಂದೂರು ಕಡೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತೆರಳುತ್ತಿದ್ದರು. ಈ ವೇಳೆ ಯಡ್ತರೆ ಜಂಕ್ಷನ್ ಯೂಟರ್ನ್ ಸಮೀಪ ಅದೇ ಮಾರ್ಗದಲ್ಲಿ ಹಿಂದಿನಿಂದ ಬಂದ ಲಾರಿಯೊಂದು ಡಿಕ್ಕಿಯಾಗಿದೆ. ಪರಿಣಾಮ ಅವರ ತಲೆ ಹಾಗೂ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯವಾಗಿತ್ತು.
ತಕ್ಷಣ ಅವರನ್ನು ಬೈಂದೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net