ಉಬಾರ್ ವಿಜಯ-ವಿಕ್ರಮ ಜೋಡುಕರೆ ಕಂಬಳ

ಉಪ್ಪಿನಂಗಡಿ ವಿಜಯ-ವಿಕ್ರಮ ಜೋಡುಕರೆ ಕಂಬಳ ಸಿದ್ಧತಾ ಸಭೆ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ, ಸಮಿತಿಯ ಗೌರವಾಧ್ಯಕ್ಷ ಎನ್.ಉಮೇಶ ಶೆಣೈ, ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು ಮೊದಲಾದವರಿದ್ದರು.
ಉಪ್ಪಿನಂಗಡಿ ವಿಜಯ-ವಿಕ್ರಮ ಜೋಡುಕರೆ ಕಂಬಳ ಸಿದ್ಧತಾ ಸಭೆ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ, ಸಮಿತಿಯ ಗೌರವಾಧ್ಯಕ್ಷ ಎನ್.ಉಮೇಶ ಶೆಣೈ, ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು ಮೊದಲಾದವರಿದ್ದರು.
Published on
ಉಪ್ಪಿನಂಗಡಿ: ವಿಜಯ-ವಿಕ್ರಮ ಜೋಡುಕರೆ ಕಂಬಳ ಮಾ.28ರಂದು ನಡೆಯಲಿದ್ದು, ಪೂರ್ವ ಸಿದ್ಧತಾ ಪರಿಶೀಲನಾ ಸಭೆ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅಧ್ಯಕ್ಷತೆಯಲ್ಲಿ ಹಳೆಗೇಟು ನೇತ್ರಾವತಿ ನದಿ ಕಿನಾರೆಯ ಬದಿಯಲ್ಲಿರುವ ಕಂಬಳ ಕರೆ ಬಳಿ ನಡೆಯಿತು.
ಕರೆಯ ಸಿದ್ಧತೆ, ವೇದಿಕೆ, ವೀಕ್ಷಕರಿಗೆ ಆಸನ ವ್ಯವಸ್ಥೆ, ಸ್ವಚ್ಛತಾ ವ್ಯವಸ್ಥೆ ಹಾಗೂ ಕೋಣಗಳಿಗೆ ಮಾಡಿರುವ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದು ಮಾತನಾಡಿದ ಶಾಸಕ ಅಶೋಕ್ ರೈ, ಉಪ್ಪಿನಂಗಡಿ ಕಂಬಳೋತ್ಸವ ಎಲ್ಲೆಡೆ ಹೆಸರುವಾಸಿಯಾಗಿದ್ದು, ವರ್ಷಂಪ್ರತಿ ವಿಭಿನ್ನ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯುತ್ತಿದೆ. ಇಲ್ಲಿನ ಕಂಬಳ ರಾಜ್ಯಕ್ಕೆ ಮಾದರಿಯಾಗಿದ್ದು, ಮುಖ್ಯಮಂತ್ರಿಯವರಿಂದಲೂ ಮೆಚ್ಚುಗೆ ಪಡೆದಿದೆ. ಈ ಬಾರಿಯೂ ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗದಂತೆ ಅದ್ದೂರಿಯಾಗಿ ಕಂಬಳ ಆಯೋಜಿಸಲು ಸಮಿತಿಯವರ ಒಗ್ಗಟ್ಟಿನ ಸಹಕಾರ ಅಗತ್ಯ ಎಂದರು.
ವಿಜಯ-ವಿಕ್ರಮ ಜೋಡುಕರೆ ಕಂಬಳ ಸಮಿತಿ ಗೌರವಾಧ್ಯಕ್ಷ ಎನ್.ಉಮೇಶ ಶೆಣೈ, ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು, ಪ್ರಧಾನ ಕಾರ್ಯದರ್ಶಿ ಕೇಶವ ಭಂಡಾರಿ ಬೆಳ್ಳಿಪ್ಪಾಡಿ, ಕೋಶಾಧಿಕಾರಿ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಕಾರ್ಯದರ್ಶಿಗಳಾದ ಶಿವರಾಮ ಶೆಟ್ಟಿ ಗೋಳ್ತಮಜಲು, ಚಂದ್ರಶೇಖರ ಮಡಿವಾಳ, ಜತೆ ಕಾರ್ಯದರ್ಶಿ ವಿಶ್ವನಾಥ ಶೆಟ್ಟಿ ಕಂಗ್ವೆ, ಉಪಾಧ್ಯಕ್ಷರಾದ ವಿಠಲ ಶೆಟ್ಟಿ ಕೊಲ್ಲೊಟ್ಟು, ವಾರಿಸೇನ ಜೈನ್ ಕೋಡಿಯಾಡಿಗುತ್ತು, ಗೌರವ ಸಲಹೆಗಾರ ನಿರಂಜನ್ ರೈ ಮಠಂತಬೆಟ್ಟು, ಸಂಘಟನಾ ಕಾರ್ಯದರ್ಶಿ ಯೋಗೀಶ್ ಎಸ್.ಸಾಮಾನಿ ಸಂಪಿಗೆದಡಿ ಮಠಂತಬೆಟ್ಟು, ಕೃಷ್ಣಪ್ರಸಾದ್ ಬೊಳ್ಳಾವು, ವಿಜಯ ಪೂಜಾರಿ ಚೀಮುಳ್ಳು, ಸಹ ಸಂಚಾಲಕರಾದ ಜಯಪ್ರಕಾಶ್ ಬದಿನಾರು, ಕುಮಾರನಾಥ ಪಲ್ಲತ್ತಾರು, ಸ್ವಾಗತ ಸಮಿತಿಯ ವಿಕ್ರಂ ಶೆಟ್ಟಿ ಅಂತರ, ಕೃಷ್ಣ ನಾಯ್ಕ, ನೀರಾವರಿ ಸಮಿತಿಯ ಜಗದೀಶ್ ಕುಮಾರ್ ಪರಕಜೆ, ಫಾರೂಕ್ ಪೆರ್ನೆ, ಅಬ್ದುಲ್ ಖಾದರ್ ಮತ್ತಿತರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net