

ಉಡುಪಿ: ದೆಹಲಿಯಲ್ಲಿ ಜೆನ್ ಜೀ ಯುವಕರು ಪ್ರತಿಭಟನೆ ನಡೆಸಿದ ರೀತಿಯಲ್ಲಿ ಎಸ್ಐಆರ್ ಬಗ್ಗೆಯೂ ಯುವಜನರೂ ಎಚ್ಚೆತ್ತುಕೊಂಡು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಬೇಕು ಎಂದು ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಹೇಳಿದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ವೋಟ್ ಚೋರಿ - ದೇಶ್ ಬಚಾವೋ ಅಭಿಯಾನದ ಅಂಗವಾಗಿ ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ರಾಮಲೀಲಾದಲ್ಲಿ ನಡೆದ ಪ್ರತಿಭಟನೆ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ಜ್ಞಾನೇಶ್ ಕುಮಾರ್ ಚುನಾವಣಾ ಆಯುಕ್ತರಾಗಿದ್ದರೆ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಗೆಲ್ಲುತ್ತಿದ್ದರು ಎಂದು ವ್ಯಂಗ್ಯವಾಡಿದರು.
ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿಮಾರ್ಣವಾಗಿದ್ದು, ಎಸ್ಐಆರ್ ಪ್ರಕ್ರಿಯೆಯ ಮೂಲಕ ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಪಶ್ಚಿಮ ಬಂಗಾಳ ಮತ್ತು ಬಿಹಾರ ಚುನಾವಣೆಗಳ ಬಳಿಕ ದೇಶದ ಜನರು ಎಚ್ಚೆತ್ತುಕೊಳ್ಳುವ ಸಮಯ ಬಂದಿದೆ. ಎಸ್ಐಆರ್ ಮೂಲಕ ಜನರ ಮತದಾನದ ಹಕ್ಕನ್ನು ಕಸಿದುಕೊಂಡು ಬೀಗುವ ಕೆಲಸ ನಡೆಯುತ್ತಿದೆ ಎಂದು ಟೀಕಿಸಿದರು.
ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ ಗಬ್ಬಲಡ್ಕ ಹಾಗೂ ಸಾಹಿತಿ ಗಣನಾಥ ಎಕ್ಕಾರು ಮಾತನಾಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕರಾವಳಿ ಪ್ರಾಧಿಕಾರದ ಎಂ.ಎ. ಗಫೂರ್, ಮೂಡಾ ಮಾಜಿ ಅಧ್ಯಕ್ಷ ಸದಾಶಿವ ಉಳ್ಳಾಲ್, ನಿಕಟಪೂರ್ವ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಗೋಪಾಲ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ದಿನಕರ ಹೇರೂರು, ಪ್ರಶಾಂತ್ ಜತ್ತನ್ನ, ಪ್ರಸಾದ್ ರಾಜ್ ಕಾಂಚನ್, ರಾಜು ಪೂಜಾರಿ, ಮುನಿಯಾಲು ಉದಯಕುಮಾರ್ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಬ್ಲಾಕ್ ಅಧ್ಯಕ್ಷರಾದ ರಮೇಶ್ ಕಾಂಚನ್, ದಿನೇಶ್ ಕುಲಾಲ್, ಗೋಪಿನಾಥ್ ಭಟ್, ಸದಾನಂದ ಶೆಟ್ಟಿ, ತಿಮ್ಮ ಪೂಜಾರಿ, ರಾಘವೇಂದ್ರ ಶೆಟ್ಟಿ ಕರ್ಜೆ, ಹರಿಪ್ರಸಾದ್ ಶೆಟ್ಟಿ, ವೈ. ಸುಕುಮಾರ್, ಅರವಿಂದ ಪೂಜಾರಿ, ಪ್ರದಿಪ್ ಕುಮಾರ್, ದಿನೇಶ್ ಪುತ್ರನ್, ಬಿ. ನರಸಿಂಹಮೂರ್ತಿ, ಹಿರಿಯಣ್ಣ, ಮಲ್ಯಾಡಿ ಶಿವರಾಮ ಶೆಟ್ಟಿ, ಭಾಸ್ಕರರಾವ್ ಕಿದಿಯೂರು, ಪ್ರಖ್ಯಾತ್ ಶೆಟ್ಟಿ ಉಪಸ್ಥಿತರಿದ್ದರು.
ಪ್ರಚಾರ ಸಮಿತಿ ಅಧ್ಯಕ್ಷ ಹರೀಶ್ ಕಿಣಿ ಸ್ವಾಗತಿಸಿದರು. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ವಂದಿಸಿದರು.