ಕರ್ನಾಟಕ ಪ್ರಾಂತೀಯ ಹಂತದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ನೀಡುತ್ತಿರುವ ವ್ಯಕ್ತಿಗಳ ಚಿಂತನ ಮಂಥನ ತಂಡಗಳನ್ನು ರೂಪಿಸಲಾಗುತ್ತಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬಿಷಪ್ ಡಾ.ಜೆರಾಲ್ಡ್ ಐಸಾಕ್ ಲೋಬೊ ಮಾತನಾಡಿ, ಯಾವುದೇ ಕೆಲಸಗಳಿಗೆ ಧಾರ್ಮಿಕ ವ್ಯಕ್ತಿಗಳನ್ನೇ ಆಶ್ರಯಿಸಿಕೊಂಡಿರದೇ ಶ್ರೀಸಾಮಾನ್ಯರೂ ಕೂಡ ನಾಯಕತ್ವ ವಹಿಸಿದಾಗ ಅಂತಹ ಕಾರ್ಯಕ್ರಮಕ್ಕೆ ಇನ್ನಷ್ಟು ಮಹತ್ವ ಲಭಿಸುತ್ತದೆ ಎಂದರು.
ಕರ್ನಾಟಕ ಪ್ರಾಂತ್ಯದ ಚಿಂತನ- ಮಂಥನ ತಂಡದ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ಮಾಹಿತಿ ನೀಡಿದರು. ಶ್ರೇಷ್ಠಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ಸ್ವಾಗತಿಸಿ, ಶ್ರೀಸಾಮಾನ್ಯ ಆಯೋಗದ ನಿರ್ದೇಶಕ ಡಾ.ಜೆರಾಲ್ಡ್ ಪಿಂಟೊ ವಂದಿಸಿದರು. ಶಿಕ್ಷಣ ಆಯೋಗದ ಕಾರ್ಯದರ್ಶಿ ವಿನ್ಸೆಂಟ್ ಕ್ರಾಸ್ತಾ ಪ್ರಾರ್ಥನಾ ವಿಧಿ ನೆರವೇರಿಸಿ, ಸಾರ್ವಜನಿಕ ಸಂಪರ್ಕಾಧಿಕಾರಿ ಡೆನಿಸ್ ಡೆಸಾ ಕಾರ್ಯಕ್ರಮ ನಿರೂಪಿಸಿದರು.